ದೇಶ- ವಿದೇಶ

ಆಮ್‌ ಆದ್ಮಿ ಪಾರ್ಟಿಯ ʻತ್ರಿವರ್ಣ ಸಂಭ್ರಮʼ ಬೈಕ್‌ ರ‍್ಯಾಲಿ ಆರಂಭ

ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ರಹಿತ ಬೆಂಗಳೂರಿಗೆ ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯು “ತ್ರಿವರ್ಣ ಸಂಭ್ರಮ” ಬೈಕ್‌ ರ‍್ಯಾಲಿಗೆ ಬುಧವಾರ ಚಾಲನೆ ನೀಡಿತು. ಪಕ್ಷದ ರಾಜ್ಯಾಧ್ಯಕ್ಷರಾದ ಪೃಥ್ವಿ ರೆಡ್ಡಿಯವರು ತ್ರಿವರ್ಣ ಧ್ವಜ ಹೊಂದಿದ ನೂರಾರು ಬೈಕ್‌ಗಳಿಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಹಸಿರು ನಿಶಾನೆ ತೋರಿದರು.

ಈ ವೇಳೆ ಮಾತನಾಡಿದ ಪೃಥ್ವಿ ರೆಡ್ಡಿ, “ಅವ್ಯಾಹತವಾಗಿ ನಡೆಯುತ್ತಿರುವ ಬಿಜೆಪಿಯ ಭ್ರಷ್ಟಾಚಾರದಿಂದಾಗಿ ಬೆಂಗಳೂರಿನ ಅಭಿವೃದ್ಧಿ ಕುಂಠಿತಗೊಳ್ಳುತ್ತಿದೆ. ಸರ್ಕಾರದ ಬೊಕ್ಕಸದಿಂದ ಸಾವಿರಾರು ಕೋಟಿ ರೂಪಾಯಿ ಬಿಡುಗಡೆಯಾದರೂ ಜನರ ಸಮಸ್ಯೆಗಳು ಮಾತ್ರ ಹಾಗೆಯೇ ಉಳಿದಿವೆ. ಜನರ ತೆರಿಗೆ ಹಣವು ಜನಪ್ರತಿನಿಧಿಗಳ ಜೇಬು ಸೇರಿ ಅವರು ಮಾತ್ರ ಅಭಿವೃದ್ಧಿ ಹೊಂದುತ್ತಿದ್ದಾರೆ. ಬೆಂಗಳೂರಿನ ಜನತೆಯು ಈ ಭ್ರಷ್ಟ ವ್ಯವಸ್ಥೆಗೆ ಬದಲಾವಣೆ ತರುವ ಸಂಕಲ್ಪ ಮಾಡುವ ಸಮಯ ಬಂದಿದೆ” ಎಂದು ಹೇಳಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ್‌ ರಾವ್‌ ಮಾತನಾಡಿ, “ಇಂದು ಆರಂಭವಾದ ಬೈಕ್‌ ರ‍್ಯಾಲಿಯು ಬೆಂಗಳೂರಿನ ಎಲ್ಲ ವಿಧಾನಸಭಾ ಕ್ಷೇತ್ರಗಳನ್ನು ತಲುಪಲಿದೆ. ಆಗಸ್ಟ್‌ 15ರ ಸ್ವಾತಂತ್ರ್ಯ ದಿನದ ತನಕ ರ‍್ಯಾಲಿ ಮುಂದುವರಿಯಲಿದೆ. ಅಂದು ಬನಪ್ಪ ಪಾರ್ಕ್‌ನಲ್ಲಿ ಕಾರ್ಯಕ್ರಮ ನಡೆಸಿ ರ‍್ಯಾಲಿಯನ್ನು ಅಂತ್ಯಗೊಳಿಸಲಾಗುತ್ತದೆ. ರಾಜಧಾನಿ ಬೆಂಗಳೂರಿನಲ್ಲಿ ವ್ಯಾಪಕವಾಗಿರುವ ಭ್ರಷ್ಟಾಚಾರದ ವಿರುದ್ಧ ಈ ಮೂಲಕ ಜನಜಾಗೃತಿ ಮೂಡಿಸಲಾಗುತ್ತಿದೆ” ಎಂದು ಮಾಹಿತಿ ನೀಡಿದರು.

ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, “ಸರ್ಕಾರಿ ಕಚೇರಿಗಳಲ್ಲಿ ಸಣ್ಣ ಸೇವೆ ಪಡೆಯಲು ಕೂಡ ಲಂಚ ನೀಡಬೇಕಾದಂತಹ ವಾತಾವರಣವನ್ನು ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ನಿರ್ಮಿಸಿವೆ. ರಸ್ತೆಗಳಲ್ಲಿ ಗುಂಡಿಗಳು, ಅಸಮರ್ಪಕ ಪಾದಚಾರಿ ಮಾರ್ಗಗಳು, ಅವ್ಯವಸ್ಥಿತ ಕಸ ವಿಲೇವಾರಿ, ಮೂಲ ಸೌಕರ್ಯಗಳಿಲ್ಲದ ಆರೋಗ್ಯ ಕೇಂದ್ರಗಳು, ನಿರ್ಲಕ್ಷ್ಯಕೊಳಗಾದ ಸರ್ಕಾರಿ ಶಾಲೆಗಳು, ರಾಜಕಾಲುವೆ ಒತ್ತುವರಿ ಮುಂತಾದ ಅನೇಕ ಸಮಸ್ಯೆಗಳು ಬೆಂಗಳೂರನ್ನು ಕಾಡುತ್ತಿದ್ದರೂ ಸರ್ಕಾರ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಳ್ಳುತ್ತಿಲ್ಲ. ಸ್ವಾತಂತ್ರ್ಯ ದೊರೆತು 75 ವರ್ಷಗಳಾದರೂ ಜನತೆಗೆ ಸೂಕ್ತ ಮೂಲಸೌಕರ್ಯಗಳು ದೊರೆಯದಿರುವುದು ದುರಂತ” ಎಂದು ಹೇಳಿದರು.
ಪಕ್ಷದ ಹಲವು ನಾಯಕರು, ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

andolana

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆ!

ಮೈಸೂರು : ಜಿಲ್ಲೆಯ ಟಿ.ನರಸೀಪುರ ಪಟ್ಟಣದಲ್ಲಿ ಬೆಳ್ಳಂಬೆಳಿಗ್ಗೆಯೇ ಮಚ್ಚು ಲಾಂಗುಗಳಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿ ವ್ಯಕ್ತಿಯೋರ್ವನನ್ನು ಹತ್ಯೆ ಮಾಡಿರುವ ಘಟನೆ…

1 hour ago

ಕೊಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ : ಫುಟ್‌ಬಾಲ್‌ ದಂತಕಥೆಗೆ ಭರ್ಜರಿ ಸ್ವಾಗತ

ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…

3 hours ago

ಟ್ರಂಪ್‌ ಸುಂಕ ಹೇರಿದ್ದ ರದ್ದಿಗೆ ಅಮೆರಿಕ ಸಂಸತ್ತು ನಿಲುವಳಿ

ನ್ಯೂಯಾರ್ಕ್‌ : ಭಾರತದ ಮೇಲೆ ಡೊನಾಲ್ಡ್‌ ಟ್ರಂಪ್‌ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…

3 hours ago

ಘೋರ ದುರಂತ | ಕರ್ತವ್ಯ ನಿರತ KSRTC ಮೇಲೆ ಹರಿದ ಲಾರಿ ; ಸ್ಥಳದಲ್ಲೇ ಸಾವು

ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್‌ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…

4 hours ago

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

6 hours ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

6 hours ago