ಬೆಂಗಳೂರು: ಯುವತಿಯರು ಸರ್ಕಾರಿ ಕೆಲಸ ಪಡೆಯಲು ಮಂಚ ಹತ್ತಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸಚಿವ ಪ್ರಿಯಾಂಕ ಖರ್ಗೆ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಆಮ್ ಆದ್ಮಿ ಪಾರ್ಟಿಯ ಮಹಿಳಾ ಘಟಕವು ರಾಜ್ಯ ಮಹಿಳಾ ಆಯೋಗಕ್ಕೆ ಮನವಿ ಸಲ್ಲಿಸಿತು.
ಈ ವೇಳೆ ಮಾತನಾಡಿದ ಎಎಪಿಯ ಬೆಂಗಳೂರು ನಗರ ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, “ಮಾಜಿ ಸಚಿವರಾದ ಪ್ರಿಯಾಂಕ ಖರ್ಗೆಯವರು ಆ. 12, 2022ರಂದು ಕಲಬುರಗಿಯಲ್ಲಿ ಸುದ್ದ ಗೋಷ್ಠಿಯಲ್ಲಿ ಮಾತನಾಡುವಾಗ ಮಹಿಳೆಯರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದಾರೆ. ಇದು ಲಂಚ-ಮಂಚದ ಸರಕಾರ, ಯುವಕರಿಗೆ ನೌಕರಿ ಬೇಕಂದ್ರೆ ಲಂಚ ಕೊಡಬೇಕು. ಯುವತಿಯರಿಗೆ ನೌಕರಿ ಬೇಕೆಂದರೆ ಮಂಚ ಹತ್ತಬೇಕು ಎನ್ನುವ ಕೀಳು ಹೇಳಿಕೆಯನ್ನು ನೀಡಿದ್ದಾರೆ. ಇದು ಉದ್ಯೋಗಸ್ಥ ಹಾಗೂ ಉದ್ಯೋಗಾಕಾಂಕ್ಷಿ ಮಹಿಳೆಯರಿಗೆ ಮಾಡಿರುವ ಅವಮಾನವಾಗಿದ್ದು, ಮಹಿಳಾ ಆಯೋಗವು ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.
“ರಾಜಕೀಯವಾಗಿ ತಮ್ಮ ಬೇಳೆ ಬೇಯಿಸಿಕೊಳ್ಳುವ ನಿಟ್ಟಿನಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಕೀಳು ಹೇಳಿಕೆ ನೀಡುವುದು ಹೊಸತೇನಲ್ಲ. ಆದರೆ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಪ್ರಮುಖ ಪಾತ್ರವಹಿಸಿರುವ ರಾಜಕೀಯ ಕುಟುಂಬದ ಕುಡಿಯಾಗಿರುವ ಪ್ರಿಯಾಂಕ್‌ರವರು ಸರಕಾರಿ ಕೆಲಸ ಪಡೆಯುವ ಎಲ್ಲಾ ಮಹಿಳಾ ಅಭ್ಯರ್ಥಿಗಳ ಮೇಲೆ ಕಪ್ಪು ಚುಕ್ಕೆಯನ್ನು ಬರುವಂತಹ ಈ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯ ತೀವ್ರತೆಯನ್ನು ಗಮನಿಸಿ ರಾಜ್ಯ ಮಹಿಳಾ ಆಯೋಗವು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು” ಎಂದು ಮಾಧ್ಯಮ ವಕ್ತಾರೆ ಉಷಾ ಮೋಹನ್ ಒತ್ತಾಯಿಸಿದರು.
ಆಮ್ ಆದ್ಮಿ ಪಾರ್ಟಿಯ ಮಹಿಳಾ ಮುಖಂಡರು ಭಾಗವಹಿಸಿದ್ದರು.
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…