Mysore
25
few clouds

Social Media

ಭಾನುವಾರ, 26 ಏಪ್ರಿಲ 2026
Light
Dark

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರನ್ನು ಅನರ್ಹಗೊಳಿಸಿ ಕ್ರಮ ಕೈಗೊಳ್ಳುವಂತೆ ಆಮ್ ಆದ್ಮಿ ಪಕ್ಷವು ಉಪರಾಷ್ಟ್ರಪತಿಗಳಿಗೆ ಪತ್ರ ಬರೆದಿದೆ.

ಆಮ್‌ ಆದ್ಮಿ ಪಕ್ಷದ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರು, ಈ ಸಂಬಂಧ ರಾಜ್ಯಸಭಾ ಅಧ್ಯಕ್ಷ ಹಾಗೂ ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದು, ಸಂಸದರ ನಡೆ ಆಂಟಿ-ಡಿಫೆಕ್ಷನ್ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಇತ್ತೀಚೆಗೆ ಆಮ್ ಆದ್ಮಿ ಪಕ್ಷದ 7 ರಾಜ್ಯಸಭಾ ಸದಸ್ಯರು ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಇದು ರಾಷ್ಟ್ರ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್, ಹರ್ಭಜನ್ ಸಿಂಗ್, ರಾಜೇಂದರ್ ಗುಪ್ತ, ಸ್ವಾತಿ ಮಲಿವಾಲ್ ಮತ್ತು ವಿಕ್ರಮಜಿತ್ ಸಾಹ್ನಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಈ ನಾಯಕರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಆಮ್ ಆದ್ಮಿ ಪಕ್ಷವು ತನ್ನ ಮೂಲ ಸಿದ್ಧಾಂತಗಳು ಮತ್ತು ಜನಪರ ನೀತಿಗಳಿಂದ ದೂರವಾಗಿದೆ ಎಂದು ಆರೋಪಿಸಿದ್ದಾರೆ. ಜೊತೆಗೆ ಸಂವಿಧಾನದ ಪ್ರಕಾರ ಎರಡು-ಮೂರನೇ ಸದಸ್ಯರು ಪಕ್ಷ ಬದಲಾಯಿಸಿದರೆ ಅನರ್ಹತೆ ಅನ್ವಯಿಸುವುದಿಲ್ಲ ಎಂಬ ವಾದವನ್ನೂ ಮುಂದಿಟ್ಟಿದ್ದಾರೆ.

ಹಿರಿಯ ವಕೀಲ ಕಪಿಲ್ ಸಿಬಲ್ ಸೇರಿದಂತೆ ಸಂವಿಧಾನ ತಜ್ಞರು ಈ ವಿಷಯದಲ್ಲಿ ಸಂಸದರ ಮೇಲೆ ಅನರ್ಹತಾ ಕ್ರಮ ಅನ್ವಯಿಸಬಹುದು ಎಂಬ ಅಭಿಪ್ರಾಯ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.

Tags:
error: Content is protected !!