ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರನ್ನು ಅನರ್ಹಗೊಳಿಸಿ ಕ್ರಮ ಕೈಗೊಳ್ಳುವಂತೆ ಆಮ್ ಆದ್ಮಿ ಪಕ್ಷವು ಉಪರಾಷ್ಟ್ರಪತಿಗಳಿಗೆ ಪತ್ರ ಬರೆದಿದೆ.
ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರು, ಈ ಸಂಬಂಧ ರಾಜ್ಯಸಭಾ ಅಧ್ಯಕ್ಷ ಹಾಗೂ ಉಪ ರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದು, ಸಂಸದರ ನಡೆ ಆಂಟಿ-ಡಿಫೆಕ್ಷನ್ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಇತ್ತೀಚೆಗೆ ಆಮ್ ಆದ್ಮಿ ಪಕ್ಷದ 7 ರಾಜ್ಯಸಭಾ ಸದಸ್ಯರು ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. ಇದು ರಾಷ್ಟ್ರ ರಾಜಕೀಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್, ಹರ್ಭಜನ್ ಸಿಂಗ್, ರಾಜೇಂದರ್ ಗುಪ್ತ, ಸ್ವಾತಿ ಮಲಿವಾಲ್ ಮತ್ತು ವಿಕ್ರಮಜಿತ್ ಸಾಹ್ನಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಈ ನಾಯಕರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದು, ಆಮ್ ಆದ್ಮಿ ಪಕ್ಷವು ತನ್ನ ಮೂಲ ಸಿದ್ಧಾಂತಗಳು ಮತ್ತು ಜನಪರ ನೀತಿಗಳಿಂದ ದೂರವಾಗಿದೆ ಎಂದು ಆರೋಪಿಸಿದ್ದಾರೆ. ಜೊತೆಗೆ ಸಂವಿಧಾನದ ಪ್ರಕಾರ ಎರಡು-ಮೂರನೇ ಸದಸ್ಯರು ಪಕ್ಷ ಬದಲಾಯಿಸಿದರೆ ಅನರ್ಹತೆ ಅನ್ವಯಿಸುವುದಿಲ್ಲ ಎಂಬ ವಾದವನ್ನೂ ಮುಂದಿಟ್ಟಿದ್ದಾರೆ.
ಹಿರಿಯ ವಕೀಲ ಕಪಿಲ್ ಸಿಬಲ್ ಸೇರಿದಂತೆ ಸಂವಿಧಾನ ತಜ್ಞರು ಈ ವಿಷಯದಲ್ಲಿ ಸಂಸದರ ಮೇಲೆ ಅನರ್ಹತಾ ಕ್ರಮ ಅನ್ವಯಿಸಬಹುದು ಎಂಬ ಅಭಿಪ್ರಾಯ ನೀಡಿದ್ದಾರೆ ಎಂದು ಅವರು ಹೇಳಿದ್ದಾರೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…