ಚಂಡೀಘಡ- ಅತ್ಯಾಚಾರ ಮತ್ತು ವಂಚನೆ ಆರೋಪದ ಮೇಲೆ ಬಂಧಿಸಲ್ಪಟ್ಟಿದ್ದ ಪಂಜಾಬ್‌ನ ಆಡಳಿತಾರೂಢ ಎಎಪಿ ಪಕ್ಷದ ಶಾಸಕ ಹರ್ಮೀತ್ ಸಿಂಗ್ ಧಿಲ್ಲೋನ್ ಪಠಾಣಮಾಜ್ರಾ ಕರ್ನಾಲ್‌ನಲ್ಲಿ ಅಧಿಕಾರಿಗಳ ಮೇಲೆ ಗುಂಡು ಹಾರಿಸಿ ಜೈಲಿನಿಂದ ಪರಾರಿಯಾಗಿದ್ದಾರೆ.
ಪಟಿಯಾಲದ ಸನೂರ್ ಕ್ಷೇತ್ರವನ್ನು ಪ್ರತಿನಿಧಿಸುವ ಶಾಸಕರನ್ನು ಸ್ಥಳೀಯ ಠಾಣೆಗೆ ಕರೆದೊಯ್ಯುತ್ತಿದ್ದಾಗ ಶಾಸಕರ ಸಹಾಯಕರು ಗುಂಡು ಹಾರಿಸಿ ಒಬ್ಬ ಪೊಲೀಸ್ ಅಧಿಕಾರಿಗೆ ಗಾಯಗೊಳಿಸಿದ್ದಾರೆ.
ಪಠಾಣ್‌ಮಜ್ರಾ ಮತ್ತೊಬ್ಬ ಅಧಿಕಾರಿಯ ಮೇಲೆ ವಾಹನ ಚಲಾಯಿಸಿ ನಂತರ ಸ್ಕಾರ್ಪಿಯೋ ಎಸ್‌ಯುವಿಯಲ್ಲಿ ತನ್ನ ಸಹಚರರೊಂದಿಗೆ ಪರಾರಿಯಾಗಿದ್ದಾರೆ. ಪರಾರಿಯಾಗಲು ಬಳಸಲಾದ ಫಾರ್ಚೂನರ್ ಅನ್ನು ನಂತರ ವಶಪಡಿಸಿಕೊಳ್ಳಲಾಗಿದೆ. ಪರಾರಿಯಾಗಿರುವ ಶಾಸಕನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.





