ದೇಶ- ವಿದೇಶ

ದೆಹಲಿ ವಿಧಾನಸಭೆ ಚುನಾವಣೆ: ಏಕಾಂಗಿಯಾಗಿ ಸ್ಪರ್ಧಿಸಲು ಅರವಿಂದ್‌ ಕೇಜ್ರಿವಾಲ್‌ ನಿರ್ಧಾರ

ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನೇತೃತ್ವದ ಆಮ್‌ ಆದ್ಮಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

ದೆಹಲಿ ವಿಧಾನಸಭೆ 70 ಸದಸ್ಯರನ್ನೊಳಗೊಂಡಿದ್ದು, ಮುಂದಿನ ವರ್ಷದ ಫೆಬ್ರವರಿ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಈ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ಆಮ್‌ ಆದ್ಮಿ ಪಕ್ಷ ಲೋಕಸಭಾ ಚುನಾವಣೆಯ ಸ್ಪರ್ಧೆಗಿಳಿದಿತ್ತು. ದೆಹಲಿಯ ಏಳು ಲೋಕಸಭಾ ಕ್ಷೇತ್ರಗಳಲ್ಲೂ ಸೋಲುವ ಮೂಲಕ ತೀವ್ರ ಹಿನ್ನಡೆ ಅನುಭವಿಸಿದ ಕಾರಣ ಈ ಬಾರಿ ಒಂಟಿಯಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದೆ.

ಇದಕ್ಕೂ ಮುನ್ನ ಆಮ್‌ ಆದ್ಮಿ ಪಕ್ಷವು ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದು, ಸ್ವತಂತ್ರ ಸ್ಪರ್ಧೆಯಿಂದ ಮೈತ್ರಿ ಮುರಿದುಕೊಳ್ಳಲಿದೆಯಾ ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡತೊಡಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸೌದಿ ಅರೇಬಿಯಾದಲ್ಲಿರುವ ಅಮೇರಿಕಾದ ವಾಯುನೆಲೆಯ ಮೇಲೆ ಇರಾನ್‌ ದಾಳಿ

ಟೆಹರಾನ್:‌ ಯುಎಸ್‌ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್‌ ಖಾರ್ಜ್‌ ವಾಯುನೆಲೆಯ ಮೇಲೆ ಇರಾನ್‌ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…

57 mins ago

ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ವಾಣಿಜ್ಯ ಎಲ್‌ಪಿಜಿ ನೀಡುವ ಬಗ್ಗೆ ಚರ್ಚೆ: ಸಚಿವ ಮುನಿಯಪ್ಪ

ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…

58 mins ago

ಚಾಮರಾಜನಗರ| ಗೂಡ್ಸ್‌ ಆಟೋ ಪಲ್ಟಿ: 13 ಮಂದಿಗೆ ಗಾಯ

ಚಾಮರಾಜನಗರ: ಗೂಡ್ಸ್‌ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…

2 hours ago

ಸಿಲಿಂಡರ್‌ ಪೂರೈಕೆಯಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…

2 hours ago

ಹಾಸನ: ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು: ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…

4 hours ago

ಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾದ ದಳಪತಿ ವಿಜಯ್‌

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್‌ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…

4 hours ago