ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ದೆಹಲಿ ವಿಧಾನಸಭೆ 70 ಸದಸ್ಯರನ್ನೊಳಗೊಂಡಿದ್ದು, ಮುಂದಿನ ವರ್ಷದ ಫೆಬ್ರವರಿ ತಿಂಗಳಿನಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಈ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನೊಂದಿಗೆ ಮೈತ್ರಿ ಮಾಡಿಕೊಂಡು ಆಮ್ ಆದ್ಮಿ ಪಕ್ಷ ಲೋಕಸಭಾ ಚುನಾವಣೆಯ ಸ್ಪರ್ಧೆಗಿಳಿದಿತ್ತು. ದೆಹಲಿಯ ಏಳು ಲೋಕಸಭಾ ಕ್ಷೇತ್ರಗಳಲ್ಲೂ ಸೋಲುವ ಮೂಲಕ ತೀವ್ರ ಹಿನ್ನಡೆ ಅನುಭವಿಸಿದ ಕಾರಣ ಈ ಬಾರಿ ಒಂಟಿಯಾಗಿ ಸ್ಪರ್ಧಿಸುವ ನಿರ್ಧಾರ ಮಾಡಿದೆ.
ಇದಕ್ಕೂ ಮುನ್ನ ಆಮ್ ಆದ್ಮಿ ಪಕ್ಷವು ಇಂಡಿಯಾ ಮೈತ್ರಿಕೂಟದ ಭಾಗವಾಗಿದ್ದು, ಸ್ವತಂತ್ರ ಸ್ಪರ್ಧೆಯಿಂದ ಮೈತ್ರಿ ಮುರಿದುಕೊಳ್ಳಲಿದೆಯಾ ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡತೊಡಗಿದೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…