ನವದೆಹಲಿ: ಅಬುಧಾಬಿಯ ಯುವರಾಜ ಶೇಖ್ ಖಾಲಿದ್ ಬಿನ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಪ್ರಧಾನಿ ನರೇಂದ್ರ ಮೋದಿ ಆಹ್ವಾನದ ಮೇರೆಗೆ ಭಾರತಕ್ಕೆ ಆಗಮಿಸಿದ್ದಾರೆ.
ಭಾರತಕ್ಕೆ ಆಗಮಿಸಿದ ಅಲ್ ನಹ್ಯಾನ್ ಅವರನ್ನು ಸಚಿವ ಪಿಯೂಷ್ ಗೋಯಲ್ ಅವರು ಔಪಚಾರಿಕವಾಗಿ ಸ್ವಾಗತಿಸಿದ್ದಾರೆ.
ಅಬುಧಾಬಿಯ ಯುವರಾಜರಾದ ನಂತರ ಮೊದಲ ಬಾರಿಗೆ ಅಲ್ ನಹ್ಯಾನ್ ಅವರು ಭಾರತಕ್ಕೆ ಆಗಮಿಸಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ದ್ವಿಪಕ್ಷೀಯ ಸಹಕಾರದ ವ್ಯಾಪಕ ವಿಷಯಗಳ ಬಗ್ಗೆ ಕೂಲಂಕುಷವಾಗಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಹ ಭೇಟಿಯಾಗಲಿದ್ದಾರೆ.
ನಾಳೆ ನಹ್ಯಾನ್ ಅವರು ಮುಂಬೈಗೆ ಭೇಟಿ ನೀಡಲಿದ್ದು, ವ್ಯಾಪಾರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಎರಡೂ ದೇಶಗಳ ಉದ್ಯಮಿಗಳು ಈ ಸಮಾವೇಶದಲ್ಲಿ ಭಾಗವಹಿಸುವುದು ಅತ್ಯಂತ ವಿಶೇಷವೆನಿಸಿದೆ.
ಹೆಚ್.ಎಸ್. ದಿನೇಶ್‌ಕುಮಾರ್ ಚುನಾಯಿತ ಪ್ರತಿನಿಧಿಗಳಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ದರ್ಬಾರು ಮೈಸೂರು: ಜವಾಬ್ದಾರಿಯುತ ಹಾಗೂ ಜನರ ಪರ ಆಲೋಚಿಸುವ ಜನಪ್ರತಿನಿಧಿಗಳಿಲ್ಲದಿದ್ದಲ್ಲಿ ಏನೆಲ್ಲಾ…
ಮೊದಲ ಬಾರಿಗೆ ಸಂಪೂರ್ಣ ಡಿಜಿಟೆಲ್ ರೂಪದಲ್ಲಿ ಗಣತಿ ಮೊದಲ ಹಂತ ಏ.೧೫ರವರೆಗೆ; ಏ.೧೬ರಿಂದ ೨ನೇ ಹಂತ ಬೆಂಗಳೂರು: ರಾಷ್ಟ್ರೀಯ ಜನಗಣತಿ…
ಮೈಸೂರು: ಅಡುಗೆ ಅನಿಲ ಸಂಕಷ್ಟವನ್ನು ಎದುರಿಸುತ್ತಿರುವ ಜನತೆಗೆ ರಾಜ್ಯ ಸರ್ಕಾರ ನೀರಿನ ದರ ಹೆಚ್ಚಳದ ಶಾಕ್ ನೀಡಿದೆ. ಏ.೧ರಿಂದ ಜಾರಿಗೆ…
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…