ಬಿಲಾಸ್‌ಪುರ: ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ನಡೆದಿದೆ.
ಛತ್ತೀಸ್‌ಗಢದ ಬಿಲಾಸ್‌ಪುರದ ಲಾಲ್ ಖಾದನ್ ಬಳಿ ಪ್ರಯಾಣಿಕ ರೈಲು ಹಾಗೂ ಸರಕು ರೈಲು ಮುಖಾಮುಖಿ ಡಿಕ್ಕಿ ಹೊಡೆದಿದೆ.
ಇದನ್ನು ಓದಿ: ರೈಲು ಹರಿದು ನಾಲ್ವರು ಸಾವು..!
ಪರಿಣಾಮ ಹಲವಾರು ಬೋಗಿಗಳು ಹಳಿತಪ್ಪಿದ್ದು, ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 12ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.





