ರಾಣಿಪೇಟೆ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಕ್ಯಾಂಟರ್ ನಡುವಿನ ಸಂಭವಿಸಿದ ಭೀಕರ ಅಪಘಾತದಲ್ಲಿ ಕ್ಯಾಂಟರ್‌ನಲ್ಲಿದ್ದ ನಾಲ್ವರು ಹಾಗೂ ಬಸ್ ಚಾಲಕ ಸೇರಿ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿನ ರಾಣಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್, ಕೃಷ್ಣಪ್ಪ ಎಂಬುವವರು ಮೃತಪಟ್ಟಿದ್ದು, ನಲ್ಲೂರು ಗ್ರಾಮದ ಸರಸ್ವತಮ್ಮ ಎಂಬುವವರ ಸ್ಥಿತಿ ಗಂಭೀರವಾಗಿದೆ. ಮೃತಪಟ್ಟವರ ಪೈಕಿ ನಾಲ್ವರು ಕೋಲಾರ ಮೂಲದವರು ಎಂಬುದಾಗಿ ತಿಳಿದು ಬಂದಿದೆ.
ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ 50 ಮಂದಿ ಭಕ್ತರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ತಮಿಳುನಾಡಿನ ಮೇಳ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ಪ್ರವಾಸ ಹೋಗಿ ವಾಪಸ್ಸ ಬರುತ್ತಿದ್ದರು. ಈ ವೇಳೆ ಶ್ರೀನಿವಾಸಪುರ ತಾಲೂಕು ಸೀಗೆಹಳ್ಳಿ ಗ್ರಾಮದಿಂದ ಚೆನ್ನೈಗೆ ತರಕಾರಿ ತುಂಬಿಕೊಂಡು ಹೋಗುತ್ತಿದ್ದ ಕ್ಯಾಂಟರ್ ಮತ್ತು ಕೆಎಸ್‌ಆರ್‌ಟಿಸಿ ನಡುವೆ ಅಪಘಾತ ಸಂಭವಿಸಿದೆ.





