ಶ್ರೀನಗರ: ಮೂರು ಬಸ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ 10ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಗಾಯಗೊಂಡಿರುವ ಘಟನೆ ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದಿದೆ.
ಗಾಯಾಳು ಯಾತ್ರಿಕರನ್ನು ಚಿಕಿತ್ಸೆಗಾಗಿ ಶ್ರೀನಗರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎಲ್ಲಾ ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಮರನಾಥ ಯಾತ್ರೆಗಾಗಿ ಬೇಸ್ ಕ್ಯಾಂಪ್‌ಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಉಳಿದ ಪ್ರಯಾಣಿಕರಿಗೆ ಮೀಸಲು ಬಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಪ್ರಯಾಣ ಮುಂದುವರಿಸಿದ್ದಾರೆ.




