ಕೇರಳ/ಕೊಟ್ಟಾಯಂ: ಇಲ್ಲಿನ ಸಮೀಪದ ಪಾಲ ಎಂಬಲ್ಲಿನ ರಾಮಪುರದಲ್ಲಿ ನಿನ್ನೆ ತಡರಾತ್ರಿ ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್ ಅವರ ಕಾರು ಅಪಘಾತಕ್ಕೀಡಾಗಿದ್ದು, ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಪಿ.ವಿ.ಮೋಹನ್ ಮೂಲತಃ ಮಂಗಳೂರಿನವರಾಗಿದ್ದು, ಕೊಚ್ಚಿಯಿಂದ ಗೋವಾ ಮೂಲಕ ಬೆಳಗಾವಿ ಸಮಾವೇಶಕ್ಕೆ ತೆರಳುತ್ತಿದ್ದರು. ಈ ವೇಳೆ ನಿನ್ನೆ(ಜನವರಿ.19) ತಡ ರಾತ್ರಿ ಪಾಲ ಸಮೀಪದಲ್ಲಿ ಮೋಹನ್ ಅವರ ಕಾರಿಗೆ ಯಾವುದು ವಾಹನ ಡಿಕ್ಕಿ ಹೊಡೆದು ಪರಾರಿಯಾಗಿದೆ.
ಈ ಅಪಘಾತದಲ್ಲಿ ಮೋಹನ್ ಅವರ ಕಾಲಿಗೆ ಗಂಭೀರ ಗಾಯವಾಗಿದ್ದು, ಪಾಲ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕೊಚ್ಚಿಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲದೇ ಅವರ ಆರೈಕೆಯ ಉಸ್ತುವಾರಿಯನ್ನು ಸ್ಥಳೀಯ ಕಾಂಗ್ರೆಸ್ ಮುಖಂಡರು ವಹಿಸಿಕೊಳ್ಳಲಾಗಿದೆ.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…