Mysore
22
broken clouds

Social Media

ಶುಕ್ರವಾರ, 18 ಸೆಪ್ಟೆಂಬರ್ 2026
Light
Dark

ಇಂಡೋನೇಷ್ಯಾದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ: 7 ಮಂದಿ ಸಾವು

ಜಕಾರ್ತ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿದ್ದಾರೆ.

ಜಕಾರ್ತಾ ಹೊರವಲಯದ ಬೆಕಾಸಿಯಲ್ಲಿ ಈ ಘಟನೆ ನಡೆದಿದ್ದು, ಪ್ರಯಾಣಿಕ ರೈಲು ಹಾಗೂ ಮತ್ತೊಂದು ರೈಲಿನ ನಡುವೆ ಡಿಕ್ಕಿ ಸಂಭವಿಸಿದೆ.

ಲೆವೆಲ್‌ ಕ್ರಾಸಿಂಗ್‌ನಲ್ಲಿ ಟ್ಯಾಕ್ಸಿಯೊಂದು ಪ್ರಯಾಣಿಕರ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ರೈಲು ಹಳಿಯಲ್ಲಿ ನಿಂತಿತ್ತು. ಇದೇ ವೇಳೆಗೆ ಮತ್ತೊಂದು ರೈಲು ಬಂದು ಪ್ರಯಾಣಿಕ ರೈಲಿನ ಮಹಿಳೆಯರ ಬೋಗಿಗೆ ಡಿಕ್ಕಿ ಹೊಡೆದಿದೆ.

ಅಪಘಾತದ ಪರಿಣಾಮ ರೈಲಿನ ಬೋಗಿಗಳು ಜಖಂಗೊಂಡು 7 ಮಂದಿ ಮೃತಪಟ್ಟಿದ್ದಾರೆ. ಇನ್ನೂ ಹಲವರು ಬೋಗಿಯಲ್ಲೇ ಸಿಲುಕಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Tags:
error: Content is protected !!