ಜಕಾರ್ತ: ಇಂಡೋನೇಷ್ಯಾದ ಜಕಾರ್ತಾ ಹೊರವಲಯದಲ್ಲಿ ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 81 ಮಂದಿ ಗಾಯಗೊಂಡಿದ್ದಾರೆ.
ಜಕಾರ್ತಾ ಹೊರವಲಯದ ಬೆಕಾಸಿಯಲ್ಲಿ ಈ ಘಟನೆ ನಡೆದಿದ್ದು, ಪ್ರಯಾಣಿಕ ರೈಲು ಹಾಗೂ ಮತ್ತೊಂದು ರೈಲಿನ ನಡುವೆ ಡಿಕ್ಕಿ ಸಂಭವಿಸಿದೆ.
ಲೆವೆಲ್ ಕ್ರಾಸಿಂಗ್‌ನಲ್ಲಿ ಟ್ಯಾಕ್ಸಿಯೊಂದು ಪ್ರಯಾಣಿಕರ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ರೈಲು ಹಳಿಯಲ್ಲಿ ನಿಂತಿತ್ತು. ಇದೇ ವೇಳೆಗೆ ಮತ್ತೊಂದು ರೈಲು ಬಂದು ಪ್ರಯಾಣಿಕ ರೈಲಿನ ಮಹಿಳೆಯರ ಬೋಗಿಗೆ ಡಿಕ್ಕಿ ಹೊಡೆದಿದೆ.
ಅಪಘಾತದ ಪರಿಣಾಮ ರೈಲಿನ ಬೋಗಿಗಳು ಜಖಂಗೊಂಡು 7 ಮಂದಿ ಮೃತಪಟ್ಟಿದ್ದಾರೆ. ಇನ್ನೂ ಹಲವರು ಬೋಗಿಯಲ್ಲೇ ಸಿಲುಕಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…