Mysore
29
overcast clouds

Social Media

ಬುಧವಾರ, 17 ಜೂನ್ 2026
Light
Dark

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಸೋಲಾಪುರ ಜಿಲ್ಲೆಯ ಮಲ್ಶಿರಾಸ್‌ ತಹಸಿಲ್‌ನಲ್ಲಿ ನಡೆದಿದೆ.

ಪಂಢರಪುರ ಮೂಲದ 15 ಜನರು ದೇವಸ್ಥಾನವೊಂದಕ್ಕೆ ಭೇಟಿ ನೀಡಿ ಹಿಂತಿರುಗುತ್ತಿದ್ದರು. ಈ ವೇಳೆ ಘಟನೆ ಸಂಭವಿಸಿದೆ. ಘಟನೆಯಲ್ಲಿ ಏಳು ಜನರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಸಿಎಂ ದೇವೇಂದ್ರ ಫಡ್ನವೀಸ್‌ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.

 

 

Tags:
error: Content is protected !!