ನವದೆಹಲಿ: ಕಳೆದ 2022ರಲ್ಲಿ ನಡೆದಿದ್ದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯನ್ನು ಅವಹೇಳನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಲಕ್ನೋ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಮಾರ್ಚ್.24ರಂದು ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಅಲೋಕ್ ವರ್ಮಾ ನಿರ್ದೇಶನ ನೀಡಿದ್ದಾರೆ.
ಕಳೆದ 2022ರ ಡಿಸೆಂಬರ್.16ರಂದು ಭಾರತ ಚೀನಾ ಸೇನೆಗಳ ನಡುವಿನ ಘರ್ಷಣೆ ಕುರಿತು ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗಳು ಭಾರತೀಯ ಸೇನೆಯನ್ನು ಅವಹೇಳನ ಮಾಡುವಂತಿತ್ತು ಎಂದು ದೂರುದಾರರು ಉಲ್ಲೇಖಿಸಿದ್ದಾರೆ.





