ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ವಿದ್ಯಾರ್ಥಿನಿಯೊಬ್ಬರ ಮೇಲೆ ಆಸಿಡ್ ದಾಳಿ ನಡೆದಿದೆ. ಕಾಲೇಜಿನ ಬಳಿ ಮೂವರು ಯುವಕರು 20 ವರ್ಷದ ವಿದ್ಯಾರ್ಥಿನಿ ಮೇಲೆ ಆಸಿಡ್ ಎರಚಿ ಪರಾರಿಯಾಗಿರುವುದು ಇಲ್ಲಿನ ಜನರನ್ನು ಬೆಚ್ಚಿ ಬೀಳಿಸಿದೆ. ಹಾಡಹಗಲೇ ಈ ಘಟನೆ ನಡೆದಿದೆ.
ಜಿತೇಂದರ್ ಎಂಬಾತ ತನ್ನ ಇನ್ನಿಬ್ಬರು ಸ್ನೇಹಿತರಾದ ಇಶಾನ್ ಮತ್ತು ಅರ್ಮಾನ್ ಜತೆ ಲಕ್ಷ್ಮಿಬಾಯಿ ಕಾಲೇಜಿನ ಬಳಿ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಆಕೆಯ ಮೇಲೆ ಆಸಿಡ್ ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:-ಮುಂದಿನ CJI ಆಗಿ ನ್ಯಾ.ಸೂರ್ಯಕಾಂತ್ ನೇಮಕಕ್ಕೆ ಶಿಫಾರಸು ಮಾಡಿದ ಗವಾಯಿ
ಆಕೆ ಮುಖವನ್ನು ರಕ್ಷಿಸಿಕೊಳ್ಳಲು ಪ್ರಯತ್ನಿಸಿದ ಕಾರಣ ಕೈಗಳಿಗೆ ಗಂಭೀರ ಗಾಯಗಳಾಗಿವೆ. ದಿಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಘಟನೆಯ ತನಿಖೆ ಆರಂಭಿಸಿದ್ದಾರೆ. ಬೈಕ್‌ನಲ್ಲಿ ಬಂದು ಆಸಿಡ್ ಎರಚಿ ಪರಾರಿಯಾದ ಮೂವರು ಆರೋಪಿಗಳನ್ನು ಬಂಧಿಸಲು ಹಲವು ತಂಡಗಳನ್ನು ರಚಿಸಿದ್ದಾರೆ.
ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…
ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…
ಗಿರೀಶ್ ಹುಣಸೂರು ಬಿಡಿ ಮೊಟ್ಟೆಗೆ ೭.೫೦ ರೂ.; ರಫ್ತು ಹೆಚ್ಚಳದಿಂದ ಭಾರೀ ಹೊಡೆತ ಮೈಸೂರು: ಮಾಗಿ ಚಳಿಗಾಲ ಆರಂಭ, ಚಂಡಮಾರುತದಿಂದ ಹವಾಮಾನ…
ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…
ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…