ಹೈದರಾಬಾದ್: ಪುಷ್ಪ-2 ಪ್ರೀಮಿಯರ್ ವೇಳೆ ಕಾಲ್ತುಳಿತ ಪ್ರಕರಣ ಸಂಬಂಧ ನಟ ಅಲ್ಲು ಅರ್ಜುನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈದರಾಬಾದ್ ನಾಂಪಲ್ಲಿ ಹೈಕೋರ್ಟ್ ಜನವರಿ.3ಕ್ಕೆ ಮುಂದೂಡಿಕೆ ಮಾಡಿದೆ.
ಮಧ್ಯಂತರ ಬೇಲ್‌ನಲ್ಲಿದ್ದ ನಟ ಅಲ್ಲು ಅರ್ಜುನ್ ಅವರು ರೆಗ್ಯುಲರ್ ಜಾಮೀನು ನೀಡುವುದಾಗಿ ಹೈದರಾಬಾದ್ ನಾಂಪಲ್ಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ ಇಂದು ಅಲ್ಲು ಅರ್ಜುನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಜನವರಿ.3ಕ್ಕೆ ಮತ್ತೊಮ್ಮೆ ವಿಚಾರಣೆ ನಡೆಸುವುದಾಗಿ ಹೇಳಿದೆ.
ಡಿಸೆಂಬರ್.4ರಂದು ಪುಷ್ಪ-2 ಪ್ರೀಮಿಯರ್ ವೇಳೆ ಥಿಯೇಟರ್‌ನಲ್ಲಿ ಮಹಿಳೆ ರೇವತಿ ಎಂಬುವವರು ಕಾಲ್ತುಳಿತದಿಂದ ಸಾವನ್ನಪ್ಪಿದ್ದರು.
ಘಟನೆ ನಡೆದ ಬಳಿಕ ನಟ ಅಲ್ಲು ಅರ್ಜುನ್ ವಿರುದ್ಧ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಡಿಸೆಂಬರ್.13ರಂದು ಚಿಕ್ಕಡಪಲ್ಲಿ ಪೊಲೀಸರು ಅಲ್ಲು ಅರ್ಜುನ್‌ರನ್ನು ಬಂಧಿಸಿದ್ದರು. ಬಳಿಕ ಅಲ್ಲು ಅರ್ಜುನ್‌ಗೆ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.
ಪ್ರಶಾಂತ್ ಎನ್.ಮಲ್ಲಿಕ್ ಸ್ವಚ್ಛತಾ ರಾಯಭಾರಿಗಳ ಆಶಯ ; ‘ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಿದ ಹರಿಪ್ರಿಯಾ, ವಸಿಷ್ಠ ಸಿಂಹ, ಅನನ್ಯಾ ಭಟ್…
ಗಿರೀಶ್ ಹುಣಸೂರು ರೆಸಾರ್ಟ್‌ಗಳ ಮಾಲೀಕರ ಹಿತಾಸಕ್ತಿ ಕಾಪಾಡುವ ಹುನ್ನಾರ ಪ್ರವಾಸೋದ್ಯಮ ಅಭಿವೃದ್ಧಿ ಎಂಬುದು ನೆಪ ಇಂದು ಸಫಾರಿ ವಿರೋಧಿಸಿ ಪ್ರತಿಭಟನೆ …
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…