ನವದೆಹಲಿ: ಕನ್ನಡದ ಖ್ಯಾತ ನಟ ಅನಂತ್‌ನಾಗ್ ಅವರಿಗೆ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಭೂಷಣ ಪ್ರಶಸ್ತಿ ಪ್ರದಾನ ಮಾಡಿದರು.
ಸಿನಿಮಾರಂಗದಲ್ಲಿ ಸಾಧನೆ ಮಾಡಿದ ಅನಂತ್‌ನಾಗ್ ಅವರಿಗೆ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಅನಂತ್‌ನಾಗ್ ಅವರು ಕನ್ನಡ, ಹಿಂದಿ, ಮರಾಠಿ ಸೇರಿದಂತೆ 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ರಂಗಭೂಮಿಯಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದಾರೆ.





