ಚೆನ್ನೈ: ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಗದ್ದಲವೆಬ್ಬಿಸಿದ ನಟ ಕಮಲ್ ಹಾಸನ್ ಈಗ ರಾಜ್ಯಸಭೆಗೆ ಹೋಗಲು ನಿರ್ಧರಿಸಿದ್ದು, ಇಂದು ನಾಮಪತ್ರ ಸಲ್ಲಿಸಿದ್ದಾರೆ.
ತಮಿಳುನಾಡಿನ 6 ರಾಜ್ಯಸಭಾ ಸ್ಥಾನಗಳಿಗೆ ಇದೇ ಜೂನ್.19ರಂದು ಚುನಾವಣೆ ನಡೆಯಲಿದ್ದು, ನಾಮಪತ್ರ ಸಲ್ಲಿಸಲು ಮುಂದಿನ ಸೋಮವಾರ ಕಡೆಯ ದಿನವಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಕಮಲ್ ಹಾಸನ್ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ್ದು, ಮೊದಲ ಬಾರಿಗೆ ರಾಜ್ಯಸಭೆ ಪ್ರವೇಶಿಸಲಿದ್ದಾರೆ. ಕಮಲ್ ಹಾಸನ್ ಅವರಿಂದು ತಮ್ಮ ನಾಮಪತ್ರಗಳನ್ನು ವಿಧಾನಸಭೆ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿಗೆ ಸಲ್ಲಿಸಿದ್ದಾರೆ.
ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ ತನ್ನ ನಾಲ್ಕು ರಾಜ್ಯಸಭಾ ಸ್ಥಾನಗಳಲ್ಲಿ ಒಂದನ್ನು ಕಮಲ್ ಹಾಸನ್ ಅವರ ಮಕ್ಕಳ್ ನೀಧಿ ಮಯ್ಯಂ ಪಕ್ಷಕ್ಕೆ ನೀಡಲು ನಿರ್ಧರಿಸಿದೆ.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…