ಬದರೀನಾಥ: ಉತ್ತರಾಖಂಡದ ಇತಿಹಾಸ ಪ್ರಸಿದ್ಧ ಬದರೀನಾಥ ದೇವಾಲಯಕ್ಕೆ ಖ್ಯಾತ ನಟ ರಜನಿಕಾಂತ್ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದಾರೆ.
ದೇಗುಲಕ್ಕೆ ಆಗಮಿಸಿದ ನಟನನ್ನು ಬದರಿನಾಥ-ಕೇದಾರನಾಥ ದೇವಾಲಯ ಸಮಿತಿಯ ಸದಸ್ಯರು ಆದರದಿಂದ ಬರಮಾಡಿಕೊಂಡು ತುಳಸಿ ಮಾಲೆ ಹಾಗೂ ದೇವರ ಪ್ರಸಾದವನ್ನು ನೀಡಿದರು.
ಚಳಿಗಾಲದ ಹಿನ್ನೆಲೆಯಲ್ಲಿ ಬದರಿನಾಥ ದೇಗುಲದ ಬಾಗಿಲುಗಳನ್ನು ಕೆಲ ದಿನಗಳಲ್ಲಿ ಮುಚ್ಚಲಾಗುತ್ತಿದ್ದು, ಅದಕ್ಕೂ ಮುನ್ನವೇ ಸೂಪರ್ ಸ್ಟಾರ್ ರಜನಿಕಾಂತ್ ಅವರು ಬದರಿನಾಥನ ದರ್ಶನ ಪಡೆದುಕೊಂಡಿದ್ದಾರೆ.
ಇದನ್ನು ಓದಿ : ʼಜೈಲರ್’ ಯಶಸ್ಸು: ನಿರ್ಮಾಪಕರಿಂದ ರಜಿನಿಕಾಂತ್, ನೆಲ್ಸನ್‌ಗೆ ದುಬಾರಿ ಕಾರು ಉಡುಗೊರೆ
ಬೆಚ್ಚಗಿನ ಉಡುಪು ಧರಿಸಿ, ರಜನಿಕಾಂತ್ ಅವರು ಯಾತ್ರಾ ಮಾರ್ಗದಲ್ಲಿ ಸಾಗುತ್ತಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಪ್ರತಿ ವರ್ಷದಂತೆ ಈ ಬಾರಿಯೂ ಉತ್ತರ ಭಾರತದ ಯಾತ್ರಾ ಸ್ಥಳಗಳಿಗೆ ಭೇಟಿ ನೀಡಿರುವ ತಲೈವರ್ ಕಳೆದ ಶನಿವಾರ ಋಷಿಕೇಶದ ಗಂಗಾ ನದಿಯ ದಡದಲ್ಲಿರುವ ಸ್ವಾಮಿ ದಯಾನಂದ ಆಶ್ರಮಕ್ಕೆ ಭೇಟಿ ನೀಡಿದ್ದರು.
ಮಾತ್ರವಲ್ಲ ಅವರು ತಮ್ಮ ಪ್ರವಾಸದ ವೇಳೆ ಸಾಮಾನ್ಯ ಮನುಷ್ಯರಂತೆ ರಸ್ತೆ ಬದಿಯ ಹೋಟೆಲ್‍ನಲ್ಲಿ ಊಟ ಸೇವಿಸಿ ಗಮನ ಸೆಳೆದಿದ್ದರು.
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…
ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…
ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…
ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…