ವಾಷಿಂಗ್ಟನ್: ಅನಾರೋಗ್ಯದ ನಿಮಿತ್ತ ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇದೇ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ.
ಅಭಿಮಾನಿಗಳಿಗೆ ಮತ್ತು ಕರ್ನಾಟಕದ ಜನತೆಗೆ ಹೊಸ ವರ್ಷದ ಶುಭ ಕೋರಿರುವ ನಟ ಶಿವರಾಜ್ ಕುಮಾರ್ ಅವರು, ನಾನು ಮಾರಕ ಕ್ಯಾನ್ಸರ್ ಪೀಡೆಯಿಂದ ಗುಣಮುಖನಾಗಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.
ಅಮೇರಿಕಾದ ಮಿಯಾಮಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ನಡೆದಿದ್ದ ನಟ ಶಿವರಾಜ್ ಕುಮಾರ್ ಕಿಡ್ನಿ ಶಸ್ತ್ರಚಿಕಿತ್ಸೆ ಯಶಸ್ಸಿನ ಬೆನ್ನಲ್ಲೇ ಇದೀಗ ಶಿವರಾಜ್ ಕುಮಾರ್ ಮತ್ತು ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದು, ಶಿವಣ್ಣ ಅವರ ಎಲ್ಲಾ ಮೆಡಿಕಲ್ ರಿಪೋರ್ಟ್‌ಗಳು ನೆಗೆಟಿವ್ ಬಂದಿದೆ ಎಂದು ಹೇಳಿದರು.
ಶಿವಣ್ಣ ಅವರಿಗೆ ಶಸ್ತ್ರಚಿಕಿತ್ಸೆ ಆದ ಬಳಿಕ ಇದೇ ಮೊದಲ ಬಾರಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಗೀತಕ್ಕ ಮತ್ತು ಶಿವಣ್ಣ ಅವರು ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಇದೇ ವೇಳೆ ಅಭಿಮಾನಿಗಳ ಹಾರೈಕೆಯಿಂದ ಶಿವಣ್ಣ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ತಿಳಿಸಿದ್ದಾರೆ.
ಶಿವಣ್ಣ ಈಗ ಕ್ಯಾನ್ಸರ್‌ನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಬಗ್ಗೆ ವೈದ್ಯರು ಅಧಿಕೃತ ಹೇಳಿಕೆ ನೀಡಿದ್ದು, ಅಭಿಮಾನಿಗಳು, ಗುರು ಹಿರಿಯರ ಪ್ರಾರ್ಥನೆಯ ಫಲವಾಗಿ ಶಿವರಾಜ್ ಕುಮಾರ್ ಅವರು ಕ್ಯಾನ್ಸರ್‌ನಿಂದ ಗುಣಮುಖರಾಗಿದ್ದಾರೆ. ನಿಮಗೆಲ್ಲರಿಗೂ ಧನ್ಯವಾದ ಎಂದು ಗೀತಾ ಶಿವರಾಜ್ ಕುಮಾರ್ ಹೇಳಿದ್ದಾರೆ.
ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…
ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…
ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…