ದೇಶ- ವಿದೇಶ

ಮಾರಕ ಕ್ಯಾನ್ಸರ್‌ನಿಂದ ಸಂಪೂರ್ಣ ಗುಣಮುಖರಾದ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌

ವಾಷಿಂಗ್ಟನ್:‌ ಅನಾರೋಗ್ಯದ ನಿಮಿತ್ತ ಅಮೆರಿಕಾದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ನಟ ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ ಅವರು ಇದೇ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ.

ಅಭಿಮಾನಿಗಳಿಗೆ ಮತ್ತು ಕರ್ನಾಟಕದ ಜನತೆಗೆ ಹೊಸ ವರ್ಷದ ಶುಭ ಕೋರಿರುವ ನಟ ಶಿವರಾಜ್‌ ಕುಮಾರ್‌ ಅವರು, ನಾನು ಮಾರಕ ಕ್ಯಾನ್ಸರ್‌ ಪೀಡೆಯಿಂದ ಗುಣಮುಖನಾಗಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

ಅಮೇರಿಕಾದ ಮಿಯಾಮಿ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ನಡೆದಿದ್ದ ನಟ ಶಿವರಾಜ್‌ ಕುಮಾರ್‌ ಕಿಡ್ನಿ ಶಸ್ತ್ರಚಿಕಿತ್ಸೆ ಯಶಸ್ಸಿನ ಬೆನ್ನಲ್ಲೇ ಇದೀಗ ಶಿವರಾಜ್‌ ಕುಮಾರ್‌ ಮತ್ತು ಅವರ ಪತ್ನಿ ಗೀತಾ ಶಿವರಾಜ್‌ ಕುಮಾರ್‌ ಅವರು ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ನೀಡಿದ್ದು, ಶಿವಣ್ಣ ಅವರ ಎಲ್ಲಾ ಮೆಡಿಕಲ್‌ ರಿಪೋರ್ಟ್‌ಗಳು ನೆಗೆಟಿವ್‌ ಬಂದಿದೆ ಎಂದು ಹೇಳಿದರು.

ಶಿವಣ್ಣ ಅವರಿಗೆ ಶಸ್ತ್ರಚಿಕಿತ್ಸೆ ಆದ ಬಳಿಕ ಇದೇ ಮೊದಲ ಬಾರಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಗೀತಕ್ಕ ಮತ್ತು ಶಿವಣ್ಣ ಅವರು ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಇದೇ ವೇಳೆ ಅಭಿಮಾನಿಗಳ ಹಾರೈಕೆಯಿಂದ ಶಿವಣ್ಣ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಶಿವಣ್ಣ ಈಗ ಕ್ಯಾನ್ಸರ್‌ನಿಂದ ಸಂಪೂರ್ಣ ಗುಣಮುಖರಾಗಿದ್ದಾರೆ. ಈ ಬಗ್ಗೆ ವೈದ್ಯರು ಅಧಿಕೃತ ಹೇಳಿಕೆ ನೀಡಿದ್ದು, ಅಭಿಮಾನಿಗಳು, ಗುರು ಹಿರಿಯರ ಪ್ರಾರ್ಥನೆಯ ಫಲವಾಗಿ ಶಿವರಾಜ್‌ ಕುಮಾರ್‌ ಅವರು ಕ್ಯಾನ್ಸರ್‌ನಿಂದ ಗುಣಮುಖರಾಗಿದ್ದಾರೆ. ನಿಮಗೆಲ್ಲರಿಗೂ ಧನ್ಯವಾದ ಎಂದು ಗೀತಾ ಶಿವರಾಜ್‌ ಕುಮಾರ್‌ ಹೇಳಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

9 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

9 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

9 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

9 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

9 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

11 hours ago