Mysore
29
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ.

ಚೆನ್ನೈನ ಪಣಿಯೂರಿನಲ್ಲಿರುವ ಟಿವಿಕೆ ಕೇಂದ್ರ ಕಚೇರಿಯಲ್ಲಿ ಇಂದು ನೂತನವಾಗಿ ಆಯ್ಕೆಯಾದ ಶಾಸಕರ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ಪಕ್ಷದ ಸಂಸ್ಥಾಪಕ ಮತ್ತು ನಟ ವಿಜಯ್‌ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಸಭೆಯಲ್ಲಿ ಪಕ್ಷದ ಎಲ್ಲಾ 108 ಶಾಸಕರು ಭಾಗಿಯಾಗಿದ್ದರು. ಸಭೆಯಲ್ಲಿ ವಿಜಯ್‌ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಪ್ರಸ್ತಾಪಿಸಲಾಯಿತು. ಎಲ್ಲಾ ಶಾಸಕರು ಇದಕ್ಕೆ ಒಮ್ಮತದ ಬೆಂಬಲ ಸೂಚಿಸಿದರು.

 

 

Tags:
error: Content is protected !!