ಚೆನ್ನೈ : ನಟಿ ಖುಷ್ಬೂ ಸುಂದರ್ ಅವರನ್ನು ತಮಿಳುನಾಡು ರಾಜ್ಯ ಬಿಜೆಪಿ ಉಪಾಧ್ಯಕ್ಷೆಯನ್ನಾಗಿ ಬುಧವಾರ ನೇಮಕ ಮಾಡಿ ಬಿಜೆಪಿ ಪ್ರಕಟಿಸಿದೆ.
ಮಾಜಿ ಸಂಸದರಾದ ವಿ.ಪಿ ದೊರೈಸಾಮಿ, ಕೆ.ಪಿ ರಾಮಲಿಂಗಂ, ಶಶಿಕಲಾ ಪುಷ್ಪಾ ಮತ್ತು ಮತ್ತು ಎಂ.ಚರ್ಕವರ್ತಿ ಸೇರಿದಂತೆ ಇತರುಉ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿ ಮುಂದುವರಿದಿದ್ದಾರೆ. ಅವರ ನೇಮಕಾತಿಗಳನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅನುಮೋದಿಸಿದ್ದಾರೆ ಎಂದು ಬಿಜೆಪಿ ಘಟಕದ ಅಧ್ಯಕ್ಷ ನೈನಾರ್ ನಾಗೇಂದ್ರನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೇಶವ ವಿನಾಯಕನ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ (ಸಂಘಟನೆ), ಪ್ರೊ. ರಾಮ ಶ್ರೀನಿವಾಸನ್ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಮುಂದುವರೆಯಲಿದ್ದಾರೆ.





