Mysore
27
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

ದಾಳಿಕೋರರನ್ನು ಸದೆಬಡಿಯಲು ಹೆಚ್ಚುವರಿ ಸೈನಿಕರ ನಿಯೋಜನೆ:  ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌

ನವದೆಹಲಿ: ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಇಂದು ಸೇನಾ ಪಡೆಗಳ ಮುಖ್ಯಸ್ಥರ ಜೊತೆ ತುರ್ತು ಸಭೆ ನಡೆಸಿದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು, ಕೃತ್ಯ ಎಸಗಿದ ಉಗ್ರರಿಗೆ ಕಠಿಣ ಸಂದೇಶ ರವಾನಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಭಾರತವು ಶೀಘ್ರದಲ್ಲೇ ಪ್ರತೀಕಾರ ತೀರಿಸಿಕೊಳ್ಳಲಿದೆ. ತೆರೆಮರೆಯಲ್ಲಿ ಪಿತೂರಿ ನಡೆಸಿದವರನ್ನು ಸಹ ಬಿಡುವ ಮಾತೇ ಇಲ್ಲ.

ಭಾರತದ ಪ್ರತಿಯೊಬ್ಬ ನಾಗರಿಕನೂ ಈ ಹೇಡಿತನದ ಕೃತ್ಯದ ವಿರುದ್ಧ ಒಗ್ಗಟ್ಟಾಗಿದ್ದಾನೆ. ಹಾಗಾಗಿ ಇಂತಹ ಕೃತ್ಯಗಳಿಗೆ ಕಾರಣರಾದವರಿಗೆ ಸೂಕ್ತ ಉತ್ತರ ಕೊಡುತ್ತೇವೆ. ಭಾರತ ಸರ್ಕಾರ ಉಗ್ರರನ್ನು ಸದೆಬಡಿಯಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದರು.

Tags:
error: Content is protected !!