ನವದೆಹಲಿ: ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಭಯೋತ್ಪಾದಕರು ಗುಂಡಿನ ದಾಳಿ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಇಂದು ಸೇನಾ ಪಡೆಗಳ ಮುಖ್ಯಸ್ಥರ ಜೊತೆ ತುರ್ತು ಸಭೆ ನಡೆಸಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಕೃತ್ಯ ಎಸಗಿದ ಉಗ್ರರಿಗೆ ಕಠಿಣ ಸಂದೇಶ ರವಾನಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ಭಾರತವು ಶೀಘ್ರದಲ್ಲೇ ಪ್ರತೀಕಾರ ತೀರಿಸಿಕೊಳ್ಳಲಿದೆ. ತೆರೆಮರೆಯಲ್ಲಿ ಪಿತೂರಿ ನಡೆಸಿದವರನ್ನು ಸಹ ಬಿಡುವ ಮಾತೇ ಇಲ್ಲ.
ಭಾರತದ ಪ್ರತಿಯೊಬ್ಬ ನಾಗರಿಕನೂ ಈ ಹೇಡಿತನದ ಕೃತ್ಯದ ವಿರುದ್ಧ ಒಗ್ಗಟ್ಟಾಗಿದ್ದಾನೆ. ಹಾಗಾಗಿ ಇಂತಹ ಕೃತ್ಯಗಳಿಗೆ ಕಾರಣರಾದವರಿಗೆ ಸೂಕ್ತ ಉತ್ತರ ಕೊಡುತ್ತೇವೆ. ಭಾರತ ಸರ್ಕಾರ ಉಗ್ರರನ್ನು ಸದೆಬಡಿಯಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದರು.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…