ದೇಶ- ವಿದೇಶ

ನನ್ನನ್ನು ಒಮ್ಮೆಯಾದರೂ ಜೈಲಿಗೆ ಹಾಕಬೇಕೆಂದು ಸಂಚು; ಎಡಿಜಿಪಿ ವಿರುದ್ಧ ಎಚ್‌ಡಿಕೆ ಆರೋಪ

 

ಹೊಸದಿಲ್ಲಿ: ಡಿನೋಟಿಫಿಕೇಶನ್‌ ಮತ್ತು ಶ್ರೀ ಸಾಯಿ ಮಿನರಲ್ಸ್‌ ಪ್ರಕರಣದಲ್ಲಿ ಹೇಗಾದರೂ ಮಾಡಿ ಒಮ್ಮೆಯಾದರೂ ನನ್ನನ್ನು ಜೈಲಿಗೆ ಕಳುಹಿಸಬೇಕು ಎಂದು ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್‌ ಸಂಚು ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ದೆಹಲಿಯಲ್ಲಿ ಇಂದು (ಅಕ್ಟೋಬರ್‌.1) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಡಿಜಿಪಿ ಎಂ.ಚಂದ್ರಶೇಖರ್‌ ಅವರು ಒಂದು ದಿನವಾದರೂ ನನ್ನನ್ನು ಜೈಲಿಗೆ ಕಳುಹಿಸಬೇಕು ಎಂಬ ಆಕ್ಷೇಪವನ್ನು ನಾನು ಗಮನಿಸಿದ್ದೇನೆ. ಚಾರ್ಜ್‌ಶೀಟ್‌ನಲ್ಲಿ ನನ್ನ ಹೆಸರು ಸೇರಿಸಲು ರಾಜ್ಯಪಾಲರ ಬಳಿ ಹೋಗಿದ್ದಾರೆ. ನಾನು ಜಾಮೀನು ಪಡೆದಿದ್ದು ತಪ್ಪು ಮಾಡಿದ್ದೇನೆ ಎಂದು ಅಲ್ಲ. ಅದರ ಬದಲಾಗಿ ನನ್ನ ಆರೋಪಿ ಸ್ಥಾನದಲ್ಲಿ ನಿಲ್ಲಿಸಿದ್ದರು ಆ ಕಾರಣಕ್ಕಾಗಿ ಜಾಮೀನು ಪಡೆದಿದ್ದೇನೆ. ಹೀಗಾಗಿ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೋ ಒಬ್ಬ ಅಧಿಕಾರಿ ನನ್ನ ಮೇಲೆ ಕ್ರಿಮಿನಲ್‌ ಎಂಬ ಪದ ಬಳಕೆ ಮಾಡಿದ್ದಾರೆ ಎಂದು ವಾಗಾಳಿ ನಡೆಸಿದರು.

ರಾಜಕೀಯ ಆರೋಪಗಳಲ್ಲಿ ಯಾರು ನನ್ನನ್ನು ಏನು ಮಾಡಲಾಗದು: ಎಚ್‌.ಡಿ.ಕುಮಾರಸ್ವಾಮಿ
ರಾಜ್ಯದಲ್ಲಿ ರಾಜಕೀಯ ಪ್ರೇರಿತ ಕೇಸ್‌ನಲ್ಲಿ ನಿರಾಪರಾಧಿಗಳನ್ನು ಅಪರಾಧಿ ಮಾಡಿ, ರಾಜಕಾರಣದ ಆರೋಪಗಳ ಮೂಲಕ ನನ್ನನ್ನು ಏನು ಮಾಡಲು ಸಾಧ್ಯವಿಲ್ಲ. ನಾನು ನನ್ನ ಅಧಿಕಾರವನ್ನು ಎಂದಿಗೂ ದುರುಪಯೋಗಪಡಿಸಿಕೊಂಡು ಅಧಿಕಾರಿಗಳನ್ನು ಬೆದರಿಸಿದವನಲ್ಲ. ರಾಜಭವನದಲ್ಲಿ ಮಾಹಿತಿ ಸೋರಿಕೆಯ ತನಿಖೆ ವಿಚಾರವಾಗಿ ನಾನು ಅಧಿಕಾರಿಯನ್ನು ಪ್ರಶ್ನೆ ಮಾಡಿದ್ದೇನೆ. ಇದರ ಹೊರತಾಗಿ ನಾನು ನನ್ನ ಕೇಸ್‌ಗೆ ಸಂಬಂಧಪಟ್ಟಂತೆ ಆ ಅಧಿಕಾರಿಯನ್ನು ಪ್ರಶ್ನಿಸಿಲ್ಲ. ರಾಜ್ಯಪಾಲರ ಕಚೇರಿಗೆ ಪತ್ರ ಬರೆದು ಅವಮಾನ ಮಾಡಿದ್ದ ಒಬ್ಬ ಜವಾಬ್ದಾರಿಯುತ ಅಧಿಕಾರಿಯ ಉದ್ಘಟತನವನ್ನು ಪ್ರಶ್ನೆ ಮಾಡಿದ್ದೇನೆ ಅಷ್ಟೇ. ನನಗೂ ನನ್ನ ಇತಿಮಿತಿಗಳ ಅರಿವು ಇದೆ ಎಂದು ತಿಳಿಸಿದರು.

ದೇಶದಲ್ಲಿ ಅಕ್ರಮ ಹಣ ಸಂಪಾದನೆ ಮಾಡುವವರಿಗೆ ರಕ್ಷಣೆ ನೀಡಿ ಎಣದು ನಿಮ್ಮನ್ನು ಐಪಿಎಸ್‌ ಆಫೀಸರ್‌ ಮಾಡಿದ್ದಾರಾ? ನಾನು ಜಾಮೀನು ತೆಗೆದುಕೊಂಡಿರುವುದು ನಿಜಾ ಆದರೆ ತನಿಖೆ ನಡೆಸಬೇಡಿ ಎಂದು ಹೇಳಿಲ್ಲ. ನನ್ನ ವಿರುದ್ಧ ತನಿಖೆ ನಡೆಸುತ್ತಿರುವ ಅಧಿಕಾರಿ ಯಾವ ಹಿನ್ನೆಲೆಯಿಂದ ಬಂದವರು? ಅಧಿಕಾರಿ ವಿರುದ್ಧವೇ ಕೇಸ್‌ ದಾಖಲಾಗಿದೆ. ಆರೋಪಿ ನಂ.2 ಆಗಿ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ತೆಗೆದುಕೊಂಡಿದ್ದಾರೆ. ನಾನು ಯಾರಿಗೂ ರಕ್ಷಣೆ ನೀಡಲ್ಲ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಅಕ್ರಮ ವಾಸಿಗಳ ಪತ್ತೆಗೆ ಸರ್ಕಾರದಿಂದ ಹೊಸ ಕ್ರಮ: ಸಚಿವ ಜಿ.ಪರಮೇಶ್ವರ್‌ ಮಾಹಿತಿ

ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…

19 mins ago

ಮಂಡ್ಯ ನುಡಿಜಾತ್ರೆಗೆ ಬರುವವರಿಗೆ ಭರ್ಜರಿ ಭೋಜನ ವ್ಯವಸ್ಥೆ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…

34 mins ago

ಅಂಬೇಡ್ಕರ್‌ ಕುರಿತು ಅಮಿತ್‌ ಶಾ ವಿವಾದಾತ್ಮಕ ಹೇಳಿಕೆ: ದೇಶಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

ನವದೆಹಲಿ: ಬಾಬಾಸಾಹೇಬ್‌ ಅಂಬೇಡ್ಕರ್‌ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…

1 hour ago

ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸ್‌ ಹಿಂಪಡೆದ ರಾಜ್ಯ ಸರ್ಕಾರ

ತುಮಕೂರು: 70 ಲಕ್ಷ ಕರೆಂಟ್‌ ಬಿಲ್‌ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…

2 hours ago

ಪದ್ಮಶ್ರೀ ಪುರಸ್ಕೃತ ಜಾನಪದ ಕಲಾವಿದ ಮೊಗಿಲಯ್ಯ ವಿಧಿವಶ

ಹೈದರಾಬಾದ್:‌ ಟಾಲಿವುಡ್‌ ಚಲನಚಿತ್ರ ಬಳಗಂ ಮೂಲಕ ಪ್ರಖ್ಯಾತಿ ಗಳಿಸಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗಿಲಯ್ಯ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.…

2 hours ago

ರಾಜಕೀಯ ಅಧಿಕಾರ ಹಿಡಿಯಲು ಅಂಬೇಡ್ಕರ್‌ ಹೆಸರು ಬಳಕೆ: ಸಿದ್ದರಾಮಯ್ಯ ವಿರುದ್ಧ ಆರ್‌.ಆಶೋಕ್‌ ವಾಗ್ದಾಳಿ

ಬೆಂಗಳೂರು: ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ ಕುರಿತಂತೆ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ರಾಜ್ಯದ ಮುಖ್ಯಮಂತ್ರಿ ಸಿಎಂ…

2 hours ago