ದೇಶ- ವಿದೇಶ

ಬೆಳಗಾವಿ ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಆದಿತ್ಯ ಠಾಕ್ರೆ ಒತ್ತಾಯ

ಪುಣೆ: ಬೆಳಗಾವಿಯಲ್ಲಿ ಎಂಇಎಸ್‌ ಮಹಾಮೇಳಾವ್‌ಗೆ ಅವಕಾಶ ನಿರಾಕರಿಸಿದ್ದಕ್ಕೆ ಮಹಾರಾಷ್ಟ್ರ ಮಾಜಿ ಸಚಿವ ಹಾಗೂ ಶಿವಸೇನೆ ನಾಯಕ ಆದಿತ್ಯ ಠಾಕ್ರೆ ಪ್ರತಿಕ್ರಿಯೆ ನೀಡಿದ್ದಾರೆ.

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಲೇಬೇಕೆಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಬೆಳಗಾವಿಯಲ್ಲಿ ವಾಸಿಸುತ್ತಿರುವ ಮರಾಠಿ ಮಾತನಾಡುವ ಜನರ ಹಕ್ಕುಗಳು, ಸ್ವಾತಂತ್ರ್ಯವನ್ನು ಹತ್ತಿಕ್ಕಲಾಗುತ್ತಿದೆ.

ಬೆಳಗಾವಿಯಲ್ಲಿ ಎಂಇಎಸ್‌ನವರಿಗೆ ಸಾರ್ವಜನಿಕ ಸಭೆ ನಡೆಸಲು ಮಹಾರಾಷ್ಟ್ರ ನಾಯಕರು ಭಾಗವಹಿಸಲು ಅನುಮತಿ ನೀಡಿಲ್ಲ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಬೆಳಗಾವಿಯಲ್ಲಿ ಮರಾಠಿ ಭಾಷೆ ಮಾತನಾಡುವವರನ್ನು ತುಳಿಯಲಾಗುತ್ತಿದೆ. ಅಲ್ಲಿ ಮರಾಠಿ ಭಾಷಿಕರ ಸ್ಥಿತಿ ಚಿಂತಾಜನಕವಾಗಿದೆ. ಮಹಾರಾಷ್ಟ್ರ ನಾಯಕರಿಗೆ ಕರ್ನಾಟಕ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎಂದು ಕಿಡಿಕಾರಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಆರ್ಥಿಕ ಇಲಾಖೆಯ ಅನುಮತಿ ಪಡೆದು ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

11 seconds ago

ಹೊಸದಿಲ್ಲಿ : ಭಾರತೀಯ ಜಲಪ್ರದೇಶಕ್ಕೆ ಪ್ರವೇಶಿಸಿದ ಪಾಕಿಸ್ತಾನಿ ಬೋಟ್ ಒಂದನ್ನು ಇಂದು ಕೋಸ್ಟ್ ಗಾರ್ಡ್ ವಶಪಡಿಸಿಕೊಂಡಿದ್ದು ಹಡಗಿನಲ್ಲಿದ್ದ ೧೧ ಸಿಬ್ಬಂದಿಯನ್ನು ಬಂಧಿಸಲಾಗಿದೆ.

ಭಾರತೀಯ ಜಲಪ್ರದೇಶದಲ್ಲಿ ಅಕ್ರಮ ಮೀನುಗಾರಿಕೆಗಾಗಿ ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಂಧಿತ ವ್ಯಕ್ತಿಗಳನ್ನು…

4 mins ago

ಮೈಸೂರು | 21 ರಂದು ಪಲ್ಸ್ ಪೋಲಿಯೋ ಅಭಿಯಾನ

ಮೈಸೂರು : ಡಿಸೆಂಬರ್ 21 ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 5 ವರ್ಷದೊಳಗಿನ ಪ್ರತಿ ಮಗುವಿಗೆ…

45 mins ago

ವೈದ್ಯ, ನರ್ಸ್‌ ಹುದ್ದೆ ಭರ್ತಿಗೆ ಒಂದು ತಿಂಗಳೊಳಗೆ ಕ್ರಮ : ಆರೋಗ್ಯ ಸಚಿವ ಗುಂಡೂರಾವ್‌

ಬೆಳಗಾವಿ : ರಾಜ್ಯದ ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ…

1 hour ago

ಸುಪ್ರೀಂಕೋರ್ಟ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಹಿನ್ನಡೆ

ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…

2 hours ago

ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ: ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…

2 hours ago