ದೇಶ- ವಿದೇಶ

ಶಿವಾಲಿಕ್‌ ಬಳಿಕ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ಗೆ ಆಗಮನ

ಅಹಮದಬಾದ್‌ : 47,000 ಟನ್ ಎಲ್‌ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್‌ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.‌17) ತಲುಪಿರುವುದಾಗಿ ವರದಿಯಾಗಿದೆ. ಇದರಿಂದ ಭಾರತದಲ್ಲಿ ತಲೆದೂರಿರುವ ಅಡುಗೆ ಅನಿಲದ ಕೊರತೆ ಸಮಸ್ಯೆ ಸ್ವಲ್ಪ ಮಟ್ಟಿಗೆ ಬಗೆಹರಿಯಲಿದೆ.

ಸಂಘರ್ಷದ ಬಳಿಕ ಹೊರ್ಮುಜ್‌ ಜಲಸಂಧಿ ದಾಟಿದ ಎರಡನೇ ಹಡಗು ಇದಾಗಿದೆ. ನಿನ್ನೆ(ಮಾರ್ಚ್.‌16) ಶಿವಾಲಿಕ್‌ ಹಡಗು ಸುರಕ್ಷಿತವಾಗಿ ಗುಜರಾತ್‌ನ ಕಾಂಡ್ಲಾ ಬಂದರಿಗೆ ಬಂದಿತ್ತು.

ಪರ್ಷಿಯನ್‌ ಕೊಲ್ಲಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ನಡುವೆ ಭಾರತ ʻಆಪರೇಷನ್‌ ಸಂಕಲ್ಪʼ ಅಡಿಯಲ್ಲಿ ಗಲ್ಫ ಪ್ರದೇಶದಲ್ಲಿ ನಿಯೋಜಿಸಲಾಗಿರುವ ಭಾರತದ ಯುದ್ಧನೌಕೆಗಳು ನಿರಂತರ ಕಣ್ಗಾವಲು ಕಾಯ್ದುಕೊಂಡು, ಭಾರತಕ್ಕೆ ಸಾಗುವ ಹಡಗುಗಳನ್ನು ರಕ್ಷಿಸುತ್ತಿವೆ ಎಂಬುದಾಗಿ ವರದಿ ಹೇಳಿವೆ.

 

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

1 hour ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

2 hours ago