ಸಾವು-ನೋವುಗಳ ಸಂಖ್ಯೆ ಹೆಚ್ಚುವ ಸಾಧ್ಯತೆ
ಅಹಮದಾಬಾದ್ : ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಪತನವಾದ ಏರ್ ಇಂಡಿಯಾ ವಿಮಾನದಲ್ಲಿದ್ದ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಹಿತ 242ಮಂದಿ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಎಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
ವಿಮಾನ ಅಪಘಾತದಲ್ಲಿ ಯಾರೂ ಬದುಕುಳಿದಿರುವ ಸಾಧ್ಯತೆಯಿಲ್ಲ ಎಂದು ಪೊಲೀಸ್ ಕಮಿಷನರ್ ಜಿ.ಎಸ್ ಮಲಿಕ್ ಅವರು ಅಸೋಸಿಯೇಟೆಡ್ ಪ್ರೆಸ್ (ಎಪಿ)ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ವಿಮಾನವು ಬಿ.ಜೆ ವೈದ್ಯಕೀಯ ಕಾಲೇಜಿನ ವೈದ್ಯರ ವಸತಿ ಸಮುಚ್ಚಯ ಕಟ್ಟಡದಲ್ಲಿ ಪತನವಾದರಿಂದ ಅಲ್ಲಿಯೂ ಮೃತಪಟ್ಟಿರುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.
ಮಿಲಿಟರಿ ಅಧಿಕಾರಿಗಳ ಆಘಾತ
ಜೀವಂತವಾಗಿ ಯಾರನ್ನೂ ನೋಡಿಲ್ಲ ಎಂದು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಮಿಲಿಟರಿ ಅಧಿಕಾರಿಗಳ ಆಘಾತ ವ್ಯಕ್ತಪಡಿಸಿದ್ದಾರೆ.
ತನಿಖೆ ಹೊಣೆ ಎಎಐಬಿ ಹೆಗಲಿಗೆ
ಏರ್ ಇಂಡಿಯಾ ವಿಮಾನ AI-17 ಅಪಘಾತ ಕುರಿತು ವಿಮಾನ ಅಪಘಾತ ತನಿಖಾ ಸಂಸ್ಥೆ(ಎಎಐಬಿ) ತನಿಖೆ ಆರಂಭಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಸಿದ ಬೋಯಿಂಗ್ ಕಂಪನಿ ಷೇರು ಮೌಲ್ಯ
ಇನ್ನೂ ವಿಮಾನ ದುರಂತ ಸಂಭವಿಸಿದ ಬೆನ್ನಲ್ಲೇ, ಎಲ್ಲಾ ಬೋಯಿಂಗ್ ಕಂಪನಿಯ ಷೇರುಗಳು ಶೇ8ರಷ್ಟು ಕುಸಿತ ಕಂಡಿವೆ.





