ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ.
241 ಮಂದಿ ವಿಮಾನದಲ್ಲಿ ಇದ್ದವರಾಗಿದ್ದರೆ, ಇನ್ನುಳಿದವರು ವೈದ್ಯಕೀಯ ಕಾಲೇಜು ಹಾಸ್ಟೆಲ್‌ನಲ್ಲಿ ಇದ್ದವರು ಹಾಗೂ ಸ್ಥಳೀಯ ನಿವಾಸಿಗಳು ಎಂಬುದು ತಿಳಿದು ಬಂದಿದೆ.
ವಿಮಾನದಲ್ಲಿದ ಏಕೈಕ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ವಿಶ್ವಾಸ್ ಕುಮಾರ್ ಮಾತ್ರ ಪವಾಡಸದೃಶವಾಗಿ ಬದುಕುಳಿದಿದ್ದಾರೆ. ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಯಾಣಿಕರಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾಯಿ ಕೂಡ ಸೇರಿದ್ದಾರೆ.
ಈ ಮಧ್ಯೆ ಗುರುವಾರ ರಾತ್ರಿ ಒಂದು ಬ್ಲ್ಯಾಕ್ ಬಾಕ್ಸ್‌ವೊಂದನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ. ಎರಡನೇ ಬ್ಲ್ಯಾಕ್ ಬಾಕ್ಸ್ ಮತ್ತು ಡಿಜಿಟಲ್ ವಿಡಿಯೋ ರೆಕಾರ್ಡರ್‌ಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಇವುಗಳು ಪ್ರಮುಖ ಸುಳಿವುಗಳನ್ನು ನೀಡಲಿವೆ.
ಇನ್ನು ವಿಮಾನ ಅಪಘಾತಕ್ಕೆ ಕಾರಣವೇನು ಎಂಬುದನ್ನು ಪತ್ತೆಹಚ್ಚುವುದಕ್ಕಾಗಿ ನಾಗರಿಕ ವಿಮಾನಯಾನ ಸಚಿವಾಲಯವು ಉನ್ನತ ಮಟ್ಟದ ಸಮಿತಿಯನ್ನು ರಚನೆ ಮಾಡಿದೆ.





