ದೇಶ- ವಿದೇಶ

ಅಹಮದಾಬಾದ್‌ ವಿಮಾನ ದುರಂತ ಪ್ರಕರಣ: ಮೃತರ ಸಂಖ್ಯೆ 274ಕ್ಕೆ ಏರಿಕೆ

ಅಹಮದಾಬಾದ್:‌ ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್‌ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ.

241 ಮಂದಿ ವಿಮಾನದಲ್ಲಿ ಇದ್ದವರಾಗಿದ್ದರೆ, ಇನ್ನುಳಿದವರು ವೈದ್ಯಕೀಯ ಕಾಲೇಜು ಹಾಸ್ಟೆಲ್‌ನಲ್ಲಿ ಇದ್ದವರು ಹಾಗೂ ಸ್ಥಳೀಯ ನಿವಾಸಿಗಳು ಎಂಬುದು ತಿಳಿದು ಬಂದಿದೆ.

ವಿಮಾನದಲ್ಲಿದ ಏಕೈಕ ಭಾರತೀಯ ಮೂಲದ ಬ್ರಿಟಿಷ್‌ ಪ್ರಜೆ ವಿಶ್ವಾಸ್‌ ಕುಮಾರ್‌ ಮಾತ್ರ ಪವಾಡಸದೃಶವಾಗಿ ಬದುಕುಳಿದಿದ್ದಾರೆ. ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಯಾಣಿಕರಲ್ಲಿ ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾಯಿ ಕೂಡ ಸೇರಿದ್ದಾರೆ.

ಈ ಮಧ್ಯೆ ಗುರುವಾರ ರಾತ್ರಿ ಒಂದು ಬ್ಲ್ಯಾಕ್‌ ಬಾಕ್ಸ್‌ವೊಂದನ್ನು ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ. ಎರಡನೇ ಬ್ಲ್ಯಾಕ್‌ ಬಾಕ್ಸ್‌ ಮತ್ತು ಡಿಜಿಟಲ್‌ ವಿಡಿಯೋ ರೆಕಾರ್ಡರ್‌ಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಇವುಗಳು ಪ್ರಮುಖ ಸುಳಿವುಗಳನ್ನು ನೀಡಲಿವೆ.

ಇನ್ನು ವಿಮಾನ ಅಪಘಾತಕ್ಕೆ ಕಾರಣವೇನು ಎಂಬುದನ್ನು ಪತ್ತೆಹಚ್ಚುವುದಕ್ಕಾಗಿ ನಾಗರಿಕ ವಿಮಾನಯಾನ ಸಚಿವಾಲಯವು ಉನ್ನತ ಮಟ್ಟದ ಸಮಿತಿಯನ್ನು ರಚನೆ ಮಾಡಿದೆ.

ಆಂದೋಲನ ಡೆಸ್ಕ್

Recent Posts

ಟ್ರಂಪ್‌ ಭಾಷಣದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ಭಾರೀ ಏರಿಕೆ

ವಾಷಿಂಗ್ಟನ್:‌ ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ…

9 mins ago

ಮಂಡ್ಯದಲ್ಲಿಂದು ವಿಶ್ವ ಹಿಂದೂ ಪರಿಷತ್‌ ಬೃಹತ್‌ ಶೋಭಾಯಾತ್ರೆ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್‌,…

28 mins ago

2 ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯ: ಡೊನಾಲ್ಡ್‌ ಟ್ರಂಪ್‌

ವಾಷಿಂಗ್ಟನ್:‌ ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ. ದೇಶವನ್ನು…

57 mins ago

ಶ್ರೀ ಸಬ್ಬಮ್ಮ ನೆಲೆಯ ಮಲೆನಾಡಿನಾದ್ಯಂತ ಸುಗ್ಗಿ ಉತ್ಸವ ಶುರು

ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…

2 hours ago

ಚಾಮರಾಜನಗರದಲ್ಲಿ ನೀರಿನ ಸಮಸ್ಯೆ ಮುಂದೆ ಇನ್ನೂ ಉಲ್ಭಣ!

ಬೇಸಿಗೆ ತಾಪಮಾನದ ಪರಿಣಾಮವಾಗಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಬಹುದು ಎಂದು ವರದಿ ನೀಡಿಕೆ... ಚಾಮರಾಜನಗರ: ಬೇಸಿಗೆಯ ತಾಪಮಾನದ ಪರಿಣಾಮವಾಗಿ ಕುಡಿಯುವ…

2 hours ago

ಚಂದಿರನತ್ತ ಮಾನವ: ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿ

ಫ್ಲೋರಿಡಾ: 50 ವರ್ಷಗಳ ಬಳಿಕ ಚಂದಿರನ ಅನ್ವೇಷಣೆಗೆ ಹೊರಟಿರುವ ನಾಸಾ ಐತಿಹಾಸಿಕ ಆರ್ಟೆಮಿಸ್‌-II ಮಿಷನ್‌ ಉಡಾವಣೆ ಯಶಸ್ವಿಯಾಗಿದೆ. ಅಮೇರಿಕಾದ ಕಾಲಮಾನ…

2 hours ago