Mysore
20
broken clouds

Social Media

ಶುಕ್ರವಾರ, 02 ಜನವರಿ 2026
Light
Dark

ಅಹಮದಾಬಾದ್‌ ವಿಮಾನ ದುರಂತ ಪ್ರಕರಣ: ಪ್ರಾಥಮಿಕ ತನಿಖಾ ವರದಿ ಸಲ್ಲಿಕೆ

plane crash

ಅಹಮದಾಬಾದ್:‌ ಇಡೀ ದೇಶವೇ ಬೆಚ್ಚಿ ಬೀಳುವಂತೆ ಮಾಡಿದ್ದ ಗುಜರಾತ್‍ನ ಅಹಮದಾಬಾದ್‍ನಲ್ಲಿ ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ಅಪಘಾತದ ಪ್ರಾಥಮಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು, ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ವಿಮಾನದ ಎರಡೂ ಎಂಜಿನ್‍ಗಳು ಸ್ಥಗಿತಗೊಂಡಿವೆ. ಆ ನಂತರ ವಿಮಾನ ಪತನವಾಗಿದೆ ಎಂದು ಬಹಿರಂಗಗೊಂಡಿದೆ.

ವಿಮಾನ ಅಪಘಾತ ತನಿಖಾ ಬ್ಯೂರೋ ವರದಿಯಲ್ಲಿ ಪೈಲಟ್‍ಗಳ ಕಾಕ್‍ಪಿಟ್ ಧ್ವನಿ ರೆಕಾರ್ಡಿಂಗ್ ಡೇಟಾವನ್ನು ಉಲ್ಲೇಖಿಸಲಾಗಿದೆ. ಇದರಲ್ಲಿ ವಿಮಾನವು ವಾಯುಪ್ರದೇಶಕ್ಕೆ ತಲುಪಿದ ಕೆಲವೇ ಸೆಕೆಂಡುಗಳಲ್ಲಿ ಡ್ಯುಯಲ್-ಎಂಜಿನ್ ಸ್ಥಗಿತಗೊಂಡಿರುವುದು ಅಪಘಾತಕ್ಕೆ ಕಾರಣ ಎಂದು ಸೂಚಿಸಲಾಗಿದೆ.

ಅಪಘಾತಕ್ಕೆ ಕೆಲ ಸೆಕೆಂಡುಗಳಿಗೂ ಮುನ್ನ ನಡೆದ ಸಂಭಾಷಣೆಯ ಒಂದು ಭಾಗದಲ್ಲಿ ಇದು ತಿಳಿದಿದೆ. ಜೊತೆಗೆ ವಿಮಾನವು 8 ಡಿಗ್ರಿ ಮೂಗು ಮೇಲಕ್ಕೆತ್ತಿದ ಸ್ಥಿತಿಯಲ್ಲಿತ್ತು. ಆದರೆ ಇಂಜಿನ್‍ಗಳು ಆಫ್ ಆಗಿದ್ದವು. ಇದರಿಂದ ವಿಮಾನವು ಏರಲು ಸಾಧ್ಯವಾಗಲಿಲ್ಲ ಎಂದು ವರದಿ ತಿಳಿದಿದೆ.

ವಿಮಾನದ ಎಂಜಿನ್‍ಗೆ ಇಂಧನ ಪೂರೈಕೆ ಸ್ಥಗಿತಗೊಂಡಿರುವುದು ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಎಎಐಬಿ ಗಮನಸೆಳೆದಿದೆ. ಆದಾಗ್ಯೂ, ತನಿಖಾ ಬ್ಯೂರೋ, ಈ ವರದಿ ಪ್ರಾಥಮಿಕ ಎಂದು ಹೇಳಿದೆ.

ಪ್ರಸ್ತುತ, ಅಪಘಾತದ ವಿವರವಾದ ತನಿಖೆ ನಡೆಯುತ್ತಿದೆ.ಎಎಐಬಿ ಪ್ರಾಥಮಿಕ ವರದಿಯ ಪ್ರಕಾರ, ಟೇಕಾಫ್ ನಂತರ ಎಂಜಿನ್‍ಗಳ ಇಂಧನ ಸ್ವಿಚ್‍ಗಳು ಇದ್ದಕ್ಕಿದ್ದಂತೆ ಬದಲಾದವು. ಈ ಘಟನೆ ಕೇವಲ 1 ಸೆಕೆಂಡ್ ಅಂತರದಲ್ಲಿ ಸಂಭವಿಸಿದೆ. ಈ ಸಮಯದಲ್ಲಿ, ಎಂಜಿನ್‍ಗಳಿಗೆ ಇಂಧನ ಬರುವುದು ನಿಂತುಹೋಗಿದೆ.

ಟೇಕ್ ಆಫ್ ಆದ 3 ಸೆಕೆಂಡ್‍ಗಳ ನಂತರ, ಎರಡೂ ಇಂಜಿನ್‍ಗಳ ಫ್ಯೂಯಲ್ ಕಂಟ್ರೋಲ್ ಸ್ವಿಚ್‍ಗಳು ರನ್‌ನಿಂದ ಕಟ್‍ಆಫ್‍ಗೆ ಬದಲಾದವು. ಇದರಿಂದಾಗಿ ಥ್ರಸ್ಟ್ ಇದ್ದಕ್ಕಿದ್ದಂತೆ ಕಡಿಮೆಯಾಯಿತು. ಅಲ್ಲದೇ ಒಬ್ಬ ಪೈಲಟ್ ನೀವು ಏಕೆ ಕಟ್ ಆಫ್ ಮಾಡಿದ್ರಿ? ಎಂದು ಕೇಳುವುದು ಕೇಳಿಸುತ್ತದೆ. ಅದಕ್ಕೆ ಇನ್ನೊಬ್ಬ ಪೈಲಟ್ ನಾನು ಮಾಡಿಲ್ಲ? ಎಂದು ಉತ್ತರಿಸುತ್ತಾರೆ. ಇದರಿಂದ ತಾಂತ್ರಿಕದೋಷ ಅಥವಾ ಆಕಸ್ಮಿಕವಾಗಿ ಸ್ವಿಚ್ ಆಫ್ ಆಗಿರಬಹುದು ಎಂದು ಶಂಕಿಸಲಾಗಿದೆ.

Tags:
error: Content is protected !!