ಅಹಮದಾಬಾದ್ : ಭೀಕರ ವಿಮಾನ ದುರಂತ ಸಂಭವಿಸಿದ ಸ್ಥಳವಾದ ಬಿ.ಜಿ ವೈದ್ಯಕೀಯ ಕಾಲೇಜು ವಸತಿ ಸಮುಚ್ಚಯಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಹಾಗೂ ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಜೂನ್ 14 ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿತ ಇತರೆ ಕಾಂಗ್ರೆಸ್ ನಾಯಕರೊಂದಿಗೆ ಅಹಮದಾಬಾದ್‌ನ ನಾಗರಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಯಾರನ್ನಾದರೂ ದೂಷಿಸುವುದು ಸರಿಯಲ್ಲ. ಕಪ್ಪು ಪೆಟ್ಟಿಗೆ ಪತ್ತೆಯಾಗಿದೆ. ಇದರಿಂದ ಕಾರಣ ತಿಳಿದು ಬರಲಿದೆ. ಇಂತಹ ಸಮಯದಲ್ಲಿ ಯಾರೂ ಅದರ ಕ್ರೆಡಿಟ್ ತೆಗೆದುಕೊಳ್ಳಲು ಮುಂದಾಗಬಾರದು. ಎಲ್ಲರಿಗೂ ಸರಿಯಾದ ರೀತಿಯಲ್ಲಿ ಪರಿಹಾರ ದೊರೆಯಲಿ ಎಂದು ಇದೇ ವೇಳೆ ಸುದ್ದಿಗಾರರರಿಗೆ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್, ಪಕ್ಷದ ಪರವಾಗಿ ಎಲ್ಲಾ ಕುಟುಂಬದ ಸದಸ್ಯರಿಗೆ ಸಂತಾಪ ಸೂಚಿಸಲು ಬಂದಿದ್ದೇವೆ. ಈ ಘಟನೆ ಬಗ್ಗೆ ನಮಗೆ ಅಪಾರ ದುಖಃವಾಗಿದೆ. ಬಾಕ್ಸ್ ಪತ್ತೆಯಾಗಿದ್ದು ವರದಿಗಾಗಿ ಕಾಯುತ್ತಿದ್ದೆವೆ. ಇಂತಹ ಘಟನೆಗಳು ಮರುಕಳಿಸದಿರಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಪ್ರತಿಕ್ರಿಯಿಸಿದರು.
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…