ದೇಶ- ವಿದೇಶ

ಭಾರತದಲ್ಲಿ ಎಐ ಪ್ರಯಾಣ ಅಸಾಧಾರಣವಾಗಿರಲಿದೆ : ಗೂಗಲ್‌ ಸಿಇಒ ಸುಂದರ್‌ ಪಿಚೈ

ಹೊಸದಿಲ್ಲಿ : ಗೂಗಲ್ ಸಿಇಒ ಸುಂದರ್ ಪಿಚೈ ಅವರು ಭಾರತದ ಕೃತಕ ಬುದ್ಧಿಮತ್ತೆ (AI) ಪ್ರಯಾಣವು “ಅಸಾಧಾರಣ” ಆಗಿರುವುದಾಗಿ ಹೇಳಿದ್ದಾರೆ. ಭಾರತ ಎಐ ತಂತ್ರಜ್ಞಾನದಲ್ಲಿ ಪ್ರಪಂಚದ ಅತ್ಯಂತ ಭರವಸೆಯ ಇಕೋಸಿಸ್ಟಮ್‌ಗಳಲ್ಲಿ ಒಂದಾಗಿದೆ ಎಂದು ಅವರು ಒತ್ತಿ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಪಿಚೈ, ಭಾರತದ ಭಾಷಾ ವೈವಿಧ್ಯ, ಡಿಜಿಟಲ್ ಪಬ್ಲಿಕ್ ಇನ್‌ಫ್ರಾಸ್ಟ್ರಕ್ಚರ್ ಮತ್ತು ಉತ್ತಮ ಆಧಾರಗಳಿಂದಾಗಿ ಎಐ ನಾವೀನ್ಯತೆಗೆ ಶಕ್ತಿಶಾಲಿ ಆಧಾರವನ್ನು ಒದಗಿಸುತ್ತದೆ ಎಂದು ಹೇಳಿದರು.

ಎಐ ಇದು ನಮ್ಮ ಜೀವನಕಾಲದ ಅತಿದೊಡ್ಡ ಪ್ಲಾಟ್‌ಫಾರ್ಮ್ ಶಿಫ್ಟ್. ಇದು ಆರೋಗ್ಯ, ಕೃಷಿ, ಶಿಕ್ಷಣ ಸೇರಿದಂತೆ ಎಲ್ಲಾ ಕ್ಷೇತ್ರಗಳನ್ನು ಪರಿವರ್ತಿಸುವ ಸಾಮರ್ಥ್ಯ ಹೊಂದಿದೆ. ಭಾರತದಲ್ಲಿ ಎಐ ಅಳವಡಿಕೆ ಮತ್ತು ಆಶಾವಾದ ಅತ್ಯಧಿಕವಾಗಿದ್ದು, ದೇಶವು ಹಳೆಯ ಸಮಸ್ಯೆಗಳನ್ನು “ಲೀಪ್‌ಫ್ರಾಗ್” ಮಾಡಿ ಹೊಸ ಅವಕಾಶಗಳನ್ನು ಸೃಷ್ಟಿಸಬಹುದು ಎಂದು ಅವರು ಹೇಳಿದ್ದಾರೆ.

ಹೂಡಿಕೆಯ ಬಗ್ಗೆ ಪಿಚೈ ನಿಲುವೇನು?
ಪಿಚೈ ಅವರು ಎಐ ಹೂಡಿಕೆಯ ಬಗ್ಗೆ ಮಾತನಾಡಿ, ಇದು ರೈಲುಮಾರ್ಗಗಳು ಅಥವಾ ಹೈವೇಗಳಂತೆ – ದೊಡ್ಡದಾಗಿ ಕಾಣಿಸಬಹುದು ಆದರೆ ದೀರ್ಘಕಾಲೀನ ಆರ್ಥಿಕ ಮೌಲ್ಯವನ್ನು ತರುತ್ತದೆ. ಗೂಗಲ್ ಕ್ಲೌಡ್ ಬ್ಯಾಕ್‌ಲಾಗ್ $240 ಬಿಲಿಯನ್‌ಗೆ ಏರಿಕೆಯಾಗಿದೆ ಎಂದು ಉಲ್ಲೇಖಿಸಿ, ಹೂಡಿಕೆ ಸೂಕ್ತವೆಂದು ವಿವರಿಸಿದರು. 2026ರಲ್ಲಿ ಕ್ಯಾಪೆಕ್ಸ್ $185 ಬಿಲಿಯನ್‌ಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

11 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

16 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

20 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

20 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

20 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

23 hours ago