ದೇಶ- ವಿದೇಶ

ಸಾಮರ್ಥ್ಯ ವೃದ್ಧಿಗೆ ಎಐ ಬಳಸಿಕೊಳ್ಳಿ : ಪ್ರಧಾನಿ ಮೋದಿ

ಹೊಸದಿಲ್ಲಿ : ಕೃತಕ ಬುದ್ಧಿಮತ್ತೆಗೆ ಗುಲಾಮರಾಗಬೇಡಿ ಬದಲಿಗೆ ಅದನ್ನು ಸಾಮರ್ಥ್ಯವೃದ್ಧಿಗೆ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿ ಸಮುದಾಯಕ್ಕೆ ಸಲಹೆ ನೀಡಿದ್ದಾರೆ.

ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದ ಎರಡನೇ ಸಂಚಿಕೆಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ಮೋದಿ ಅವರು, ಸ್ಟಾರ್ಟ್‌ಅಪ್‌ಗಳಿಂದ ಹಿಡಿದು ಪರೀಕ್ಷಾ ತಯಾರಿಯವರೆಗೆ ವಿವಿಧ ವಿಷಯಗಳ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿದ್ದಾರೆ.

ತಂತ್ರಜ್ಞಾನ ಬಂದ ಪ್ರತಿಯೊಂದು ಯುಗದಲ್ಲೂ ಇಂತಹ ಚರ್ಚೆಗಳು ಉದ್ಭವಿಸುತ್ತವೆ, ನಾವು ಅದರ ಬಗ್ಗೆ ಭಯಪಡಬಾರದು. ಅದರ ಗುಲಾಮರಾಗಲು ನಾವು ಶ್ರಮಿಸಬಾರದು. ಅದು ನಮ್ಮ ಯಜಮಾನರಾಗಲು ನಾವು ಬಿಡುವುದಿಲ್ಲ. ನೀವು ಅದರ ಗುಲಾಮರಾಗದಂತೆ ನೋಡಿಕೊಳ್ಳಬೇಕು ಎಂದರು.

ಉದ್ಯೋಗಗಳ ಸ್ವರೂಪ ಬದಲಾಗುತ್ತಲೇ ಇರುತ್ತದೆ. ಆದ್ದರಿಂದ ತಂತ್ರಜ್ಞಾನವನ್ನು ಅರ್ಥಮಾಡಿಕೊಳ್ಳಬೇಕು ನಾವು ಭಯಪಡಬೇಕಾಗಿಲ್ಲ ಎಂದು ಸಲಹೆ ನೀಡಿದ್ದಾರೆ.

ಪರೀಕ್ಷಾ ಪೆ ಚರ್ಚಾ 2026ರ ಎರಡನೇ ಸಂಚಿಕೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನ ವಿದ್ಯಾರ್ಥಿಗಳೊಂದಿಗೆ ತಮ್ಮ ಸಂವಾದವನ್ನು ಪ್ರಾರಂಭಿಸಿದರು. ಛತ್ತಿಸ್‌ಗಢದ ವಿದ್ಯಾರ್ಥಿಯೊಬ್ಬರು ಭಾರತದಲ್ಲಿ ಭೇಟಿ ನೀಡಲು ಉತ್ತಮ ಸ್ಥಳಗಳ ಬಗ್ಗೆ ಕೇಳಿದರು. ಪ್ರಧಾನಿ ಮೋದಿ ಕೆಲವು ಉಪಯುಕ್ತ ಸಲಹೆಗಳನ್ನು ನೀಡಿದರು.

ಸ್ಛೂರ್ತಿಯ ಜೊತೆಗೆ ಶಿಸ್ತು ಕೂಡ ಅತ್ಯಗತ್ಯ ಎಂದ ಪ್ರಧಾನಿ ಶಿಸ್ತು ಇಲ್ಲದಿದ್ದರೆ, ಯಾವುದೇ ಸ್ಛೂರ್ತಿ ಕೆಲಸ ಮಾಡುವುದಿಲ್ಲ. ರೈತ ತನ್ನ ಪಕ್ಕದಲ್ಲಿರುವ ರೈತನಿಂದ ಸ್ಛೂರ್ತಿ ಪಡೆದು, ತಾನು ಕೂಡ ಸಂಪಾದಿಸುವ ಛಲ ಬೆಳೆಸಿಕೊಳ್ಳುತ್ತಾರೆ. ಶಿಸ್ತು ಇಲ್ಲದೆ, ಸ್ಛೂರ್ತಿ ಕೆಲಸ ಮಾಡುವುದಿಲ್ಲ, ನೋಡಿದಾಕ್ಷಣ ಸ್ಛೂರ್ತಿ ಸಿಗುವುದಿಲ್ಲ, ಆ ಹಾದಿಯಲ್ಲೇ ನಡೆಯುವುದು ಕೂಡ ಮುಖ್ಯವಾಗುತ್ತದೆ ಎಂದಿದ್ದಾರೆ.

ಸ್ಟಾರ್ಟ್‌ಅಪ್ ಪ್ರಾರಂಭಿಸುವುದು ಹೇಗೆ ಎಂಬ ವಿದ್ಯಾರ್ಥಿಯೊಬ್ಬರ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿ ಮೋದಿ, ಇಂದು ನಾನು ಕಷ್ಟಪಟ್ಟು ವಿಕಸಿತ ಭಾರತದ ಬುನಾದಿ ಹಾಕುತ್ತಿರುವುದು ನಿಮಗಾಗಿ. ನೀವು ಸಣ್ಣ ಸ್ಟಾರ್ಟ್‌ಅಪ್ ಶುರು ಮಾಡಬಹುದು. ನೀವು ನಿಮ್ಮ ಅಧ್ಯಯನ ಮತ್ತು ನಿಮ್ಮ ವೃತ್ತಿಜೀವನ ಎರಡನ್ನೂ ಮುಂದುವರಿಸಲು ಬಯಸಿದರೆ, ನೀವು ಪ್ರತಿ ವಾರ ನಿಮ್ಮ ವೃತ್ತಿಜೀವನಕ್ಕೆ ಸ್ವಲ್ಪ ಸಮಯವನ್ನು ಮೀಸಲಿಡಲು ಪ್ರಾರಂಭಿಸಬೇಕು ಎಂದರು.

ಪರೀಕ್ಷೆಗಳಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಲು ಹಿಂದಿನ ಪತ್ರಿಕೆಗಳನ್ನು ಅಭ್ಯಾಸ ಮಾಡಿ ಮತ್ತು ಉತ್ತಮ ನಿದ್ರೆ ಮಾಡುವಂತೆ ಪ್ರಧಾನಿ ವಿದ್ಯಾರ್ಥಿಗಳನ್ನು ಒತ್ತಾಯಿಸಿದರು. ಪರೀಕ್ಷೆಗಳಿಗೆ ಚೆನ್ನಾಗಿ ತಯಾರಿ ನಡೆಸಿದ ನಂತರ ನೀವು ಎಂದಿಗೂ ಉದ್ವಿಗ್ನತೆಯನ್ನು ಅನುಭವಿಸುವುದಿಲ್ಲ. ರಾತ್ರಿಯ ಉತ್ತಮ ನಿದ್ರೆಯು ದಿನದ ಉಳಿದ ಸಮಯ ನಿಮ್ಮನ್ನು ಹರ್ಷಚಿತ್ತದಿಂದ ಇರಿಸುತ್ತದೆ ಎಂದು ಮೋದಿ ಹೇಳಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಲು ಯತ್ನಿಸಿದ್ದರು: ಸಿಎಂ ಡಿಕೆಶಿ ಬಾಂಬ್

ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

13 hours ago

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್!

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…

14 hours ago

ಎಸ್‌ಐಆರ್‌ ವಿರುದ್ಧ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…

15 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ಗೆ ಮತ್ತೆ ಶಾಕ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…

15 hours ago

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ: 75ನೇ ವಯಸ್ಸಿನಲ್ಲಿ ನಿಧನ

ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…

18 hours ago

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

19 hours ago