Mysore
24
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಉಗ್ರರಿಗೆ ನೆರವು ನೀಡಿದ ಆರೋಪ: 9 ಕಡೆ ಎನ್‌ಐಎ ದಾಳಿ

ನವದೆಹಲಿ: ಭಯೋತ್ಪಾದನಾ ಚಟುವಟಿಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಪಂಜಾಬ್ ಮತ್ತು ಹರಿಯಾಣದ ಒಂಬತ್ತು ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದೆ.

ಪಂಜಾಬ್‌ನಲ್ಲಿ ಎಂಟು ಮತ್ತು ಹರಿಯಾಣದ ಒಂದು ಸ್ಥಳದಲ್ಲಿ ದಾಳಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದ ಶಂಕಿತರ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.

ಈ ಕಾರ್ಯಾಚರಣೆಗಳು ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕ ಹೊಂದಿದ ಅಪರಾಧ ಚಟುವಟಿಕೆಗಳನ್ನು ಬೆಂಬಲಿಸುವ ವ್ಯಕ್ತಿಗಳು ಮತ್ತು ನೆಟ್‌ವರ್ಕ್‌ಗಳನ್ನು ಗುರಿಯಾಗಿಸಿಕೊಂಡಿವೆ. ದರೋಡೆಕೋರರು ಮತ್ತು ಭಯೋತ್ಪಾದಕ ಸಂಘಟನೆಗಳ ನಡುವೆ ಹೆಚ್ಚುತ್ತಿರುವ ಸಹಯೋಗಕ್ಕೆ ಕಡಿವಾಣ ಹಾಕಲು ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.

ಭಾರತಕ್ಕೆ ಶಸ್ತ್ರಾಸ್ತ್ರಗಳು, ಮದ್ದು ಗುಂಡುಗಳು, ಮಾದಕ ವಸ್ತುಗಳು ಮತ್ತು ಸ್ಫೋಟಕಗಳ ಕಳ್ಳಸಾಗಣೆ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಭಯೋತ್ಪಾದಕ ಸಂಘಟನೆಗಳನ್ನು ಎದುರಿಸಲು ನಡೆಸಿದ ಎನ್‌ಐಎ ದಾಳಿ ಇದಾಗಿದೆ.

Tags:
error: Content is protected !!