ನವದೆಹಲಿ: ಭಯೋತ್ಪಾದನಾ ಚಟುವಟಿಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಪಂಜಾಬ್ ಮತ್ತು ಹರಿಯಾಣದ ಒಂಬತ್ತು ಸ್ಥಳಗಳಲ್ಲಿ ಏಕಕಾಲದಲ್ಲಿ ಶೋಧ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದೆ.
ಪಂಜಾಬ್‌ನಲ್ಲಿ ಎಂಟು ಮತ್ತು ಹರಿಯಾಣದ ಒಂದು ಸ್ಥಳದಲ್ಲಿ ದಾಳಿ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದ ಶಂಕಿತರ ಬಗ್ಗೆ ಗುಪ್ತಚರ ಮಾಹಿತಿ ಆಧರಿಸಿ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.
ಈ ಕಾರ್ಯಾಚರಣೆಗಳು ಭಯೋತ್ಪಾದಕ ಗುಂಪುಗಳೊಂದಿಗೆ ಸಂಪರ್ಕ ಹೊಂದಿದ ಅಪರಾಧ ಚಟುವಟಿಕೆಗಳನ್ನು ಬೆಂಬಲಿಸುವ ವ್ಯಕ್ತಿಗಳು ಮತ್ತು ನೆಟ್‌ವರ್ಕ್‌ಗಳನ್ನು ಗುರಿಯಾಗಿಸಿಕೊಂಡಿವೆ. ದರೋಡೆಕೋರರು ಮತ್ತು ಭಯೋತ್ಪಾದಕ ಸಂಘಟನೆಗಳ ನಡುವೆ ಹೆಚ್ಚುತ್ತಿರುವ ಸಹಯೋಗಕ್ಕೆ ಕಡಿವಾಣ ಹಾಕಲು ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.
ಭಾರತಕ್ಕೆ ಶಸ್ತ್ರಾಸ್ತ್ರಗಳು, ಮದ್ದು ಗುಂಡುಗಳು, ಮಾದಕ ವಸ್ತುಗಳು ಮತ್ತು ಸ್ಫೋಟಕಗಳ ಕಳ್ಳಸಾಗಣೆ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಭಯೋತ್ಪಾದಕ ಸಂಘಟನೆಗಳನ್ನು ಎದುರಿಸಲು ನಡೆಸಿದ ಎನ್‌ಐಎ ದಾಳಿ ಇದಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…