ಭೋಪಾಲ್: ಕೇಂದ್ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ವಿಮಾನದಲ್ಲಿ ಮುರಿದ ಸೀಟ್‌ನಲ್ಲಿ ಪ್ರಯಾಣಿಸಿದ್ದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಏರ್ ಇಂಡಿಯಾ ಸಂಸ್ಥೆ ಕ್ಷಮೆ ಕೋರಿದೆ.
ಏರ್ ಇಂಡಿಯಾ ವಿಮಾದಲ್ಲಿ ಎದುರಾದ ಅನಾನುಕೂಲತೆಯ ಬಗ್ಗೆ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದ ಅವರು, ನಾನು ಕೆಲಸದ ಹಿನ್ನೆಲೆಯಲ್ಲಿ ಏರ್ ಇಂಡಿಯಾ AI436ರಲ್ಲಿ ಭೋಪಾಲ್‌ನಿಂದ ದೆಹಲಿಗೆ ತೆರಳುತ್ತಿದ್ದೆ. ಈ ವೇಳೆ ನನಗೆ ನಿಗದಿಯಾಗಿದ್ದ ಸೀಟ್ ನಂಬರ್ 8ಸಿ ನಲ್ಲಿ ಕುಳಿತುಕೊಳ್ಳಲು ಹೋದಾಗ, ಆ ಸೀಟು ಮುರಿದ ಸ್ಥಿತಿಯಲ್ಲಿ ಕಂಡು ಬಂದಿತು. ಆದರೆ ಆ ವಿಮಾನದ ಕೆಲ ಸೀಟುಗಳು ಹಾಗೆಯೇ ಇತ್ತು. ಆದರೆ ಪ್ರಯಾಣಿಕರಿಂದ ಪೂರ್ಣ ಪ್ರಮಾಣದ ಟಿಕೆಟ್ ಹಣವನ್ನು ಪಡೆದು, ಈ ರೀತಿಯ ಸೇವೆ ಒದಗಿಸುವುದು ಅನೈತಿಕ ಪದ್ಧತಿ ಎಂದು ವಾಗ್ದಾಳಿ ನಡೆಸಿದ್ದರು.
ನನ್ನ ಸೀಟು ಅನ್ನು ಬದಲಾಯಿಸಿಕೊಳ್ಳುವತೆ ಸಿಬ್ಬಂದಿ ತಿಳಿಸಿದರು. ಆದರೆ ಇತರೆ ಪ್ರಯಾಣಿಕರಿಗೆ ನನ್ನಿಂದ ಅನಾನುಕೂಲವಾಗುವುದು ಸರಿಯಲ್ಲ ಎಂದು ಅರಿತು, ನಾನು ಮುಇದ ಸೀಟಿನಲ್ಲೇ ಪ್ರಯಾಣಿಸಿದೆ ಎಂದು ತಿಳಿಸಿದ್ದಾರೆ.
ಇನ್ನು ಭವಿಷ್ಯದಲ್ಲಿ ಯಾವುದೇ ಪ್ರಯಾಣಿಕರಿಗೆ ಇಂತಹ ಅನಾನುಕೂಲತೆಯ ಪ್ರಯಾಣವನ್ನು ಒದಗಿಸದಂತೆ ಏರ್ ಇಂಡಿಯಾ ವಿಮಾನಯಾನ ಸಂಸ್ಥೆ ಕ್ರಮ ಕೈಗೊಳ್ಳುತ್ತದೆಯೇ ಅಥವಾ ಪ್ರಯಾಣಿಕರ ತುರ್ತು ಪರಿಸ್ಥಿತಿಯನ್ನು ಬಂಡವಾಳ ಮಾಡಿಕೊಂಡು ಇದೇ ರೀತಿಯ ಸೇವೆಗಳನ್ನು ಒದಗಿಸುತ್ತದೆಯೇ ಎಂಬುದನ್ನು ಪ್ರಶ್ನಿಸಿದ್ದಾರೆ.
ಶಿವರಾಜ್ ಸಿಂಗ್ ಚೌಹಾಣ್ ಅವರ ಈ ಟ್ವೀಟ್‌ಗೆ ಪ್ರತಿಕ್ರಿಯೆ ನೀಡಿರುವ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯೂ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಸರ್ ನಿಮಗೆ ಉಂಟಾದ ಅನಾನುಕೂಲತೆಗಾಗ ನಾವು ಕ್ಷಮೆಯಾಚಿಸುತ್ತೇವೆ. ಅಲ್ಲದೇ ಭವಿಷ್ಯದಲ್ಲಿ ಇಂತಹ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಎಚ್ಚರ ವಹಿಸುತ್ತೇವೆ ಎಂದು ತಿಳಿಸಿದ್ದಾರೆ.
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…
ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…
ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…
ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…
ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…
ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…