ದೇಶ- ವಿದೇಶ

AIR INDIA FLIGHT ಬಾಂಬ್‌ ಬೆದರಿಕೆ: ನ್ಯೂಯಾರ್ಕ್‌ಗೆ ಹೊರಟ್ಟಿದ್ದ ವಿಮಾನ ವಾಪಾಸ್‌ ಮುಂಬೈಗೆ

ಮುಂಬೈ: ಮುಂಬೈನಿಂದ ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಭದ್ರತಾ ಬೆದರಿಕೆ ಬಂದಿದ್ದು, ವಿಮಾನದ ಶೌಚಾಲಯವೊಂದರಲ್ಲಿ ಬಾಂಬ್ ಬೆದರಿಕೆ ಪತ್ರ ಲಭ್ಯವಾಗಿದೆ. ಈ ಹಿನ್ನೆಲೆ ವಿಮಾನವನ್ನು ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ವಾಪಾಸ್‌ ಬಂದು ಲ್ಯಾಂಡ್‌ ಆಗಿದೆ.

ಏರ್‌ ಇಂಡಿಯಾ ವಿಮಾನವೂ ಇಂದು(ಮಾರ್ಚ್‌.10) ಮುಂಬೈನಿಂದ ನ್ಯೂಯಾರ್ಕ್‌ಗೆ ಹಾರಾಟ ನಡೆಸುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಸಂಭಾವ್ಯ ಭದ್ರತಾ ಬೆದರಿಕೆಯನ್ನು ಪತ್ತೆಹಚ್ಚಲಾಯಿತು. ಅಗತ್ಯ ಶಿಷ್ಟಾಚಾರಗಳನ್ನು ಅನುಸರಿಸಿದ ಬಳಿಕ ವಿಮಾನದಲ್ಲಿದ್ದ ಎಲ್ಲರ ಸುರಕ್ಷತೆ ಹಾಗೂ ಭದ್ರತೆಯ ಹಿತದೃಷ್ಟಿಯಿಂದ ವಿಮಾನವು ಮುಂಬೈಗೆ ಹಿಂತಿರುಗಿಸಲಾಗಿದೆ. ಅಲ್ಲದೇ ಈ ಘಟನೆಯ ಮುನ್ನ ಅಗತ್ಯವಿರುವ ಎಲ್ಲಾ ಶಿಷ್ಟಾಚಾರಗಳನ್ನು ಅನುಸರಿಸಲಾಗಿದೆ ಎಂದು ಏರ್‌ ಇಂಡಿಯಾ ತಿಳಿಸಿದೆ.

ವಿಮಾನವನ್ನು ಇಂದು ಬೆಳಿಗ್ಗೆ 10.25 ಗಂಟೆಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಸುರಕ್ಷಿತವಾಗಿ ಇಳಿಸಲಾಗಿದೆ. ನಂತರ ವಿಮಾನವನ್ನು ಭದ್ರತಾ ಸಂಸ್ಥೆಗಳಿಂದ ಕಡ್ಡಾಯ ತಪಾಸಣೆಗೆ ಒಳಪಡಿಸಲಾಗಿದೆ. ಹೀಗಾಗಿ ರ್ ಇಂಡಿಯಾ ಅಧಿಕಾರಿಗಳಿಗೆ ತನ್ನ ಸಂಪೂರ್ಣ ಸಹಕಾರವನ್ನು ನೀಡುತ್ತಿದೆ ಎಂದು ಏರ್ ಇಂಡಿಯಾ ವಕ್ತಾರರು ಮಾಹಿತಿ ನೀಡಿದ್ದಾರೆ.

ಇನ್ನು ವಿಮಾನದ ವೇಳಾಪಟ್ಟಿಯಲ್ಲಿ ಈ ವಿಮಾನಯಾನಕ್ಕೆ ಮಾರ್ಚ್‌.11 ರಂದು ಬೆಳಿಗ್ಗೆ 5 ಗಂಟೆಗೆ ತೆರಳಲು ಮರು ನಿಗದಿಪಡಿಸಲಾಗಿದೆ. ಅಲ್ಲಿಯವರೆಗೂ ಎಲ್ಲಾ ಪ್ರಯಾಣಿಕರಿಗೂ ಹೋಟೆಲ್‌ ವಸತಿ, ಊಟ ಹಾಗೂ ಇತರೆ ಸಹಾಯವನ್ನು ನೀಡಲಾಗುತ್ತದೆ ಎಂದು ವಿಮಾನಯಾನ ಸಂಸ್ಥೆ ಹೇಳಿದೆ.

ಅರ್ಚನ ಎಸ್‌ ಎಸ್

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

7 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

8 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

8 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

8 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

9 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

9 hours ago