ನವದೆಹಲಿ: ಭಾರತೀಯ ವಾಯು ಸೇನೆಯ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಹಾಲಿ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್. ಚೌಧರಿ ಅವರು ಸೆ.30 ರಂದು ನಿವೃತ್ತರಾಗಲಿದ್ದು, ಅವರಿಂದ ಸಿಂಗ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.