Rain Intensifies; Red Alert Issued
ಹೊಸದಿಲ್ಲಿ : ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ ಹಿನ್ನೆಲೆ ಕರ್ನಾಟಕ, ತಮಿಳು ನಾಡು, ಆಂಧ್ರಪ್ರದೇಶ, ಒಡಿಶಾಸ ಕರಾವಳಿ ಭಾಗದಲ್ಲಿ ೯೦-೧೦೦ ಕಿಲೋಮೀಟರ್ ವೇಗದ ರಭಸದ ಗಾಳಿ ಬೀಸಲಿದ್ದು, ಮುಂದಿನ ವಾರದ ಪ್ರಾರಂಭದಲ್ಲೇ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಚಂಡಮಾರುತಕ್ಕೆ ಅಂತರರಾಷ್ಟ್ರೀಯ ಸಮುದಾಯದ ಶಿಫಾರಸಿನಂತೆ ಥಾಯ್ಲೆಂಡ್‌ನ ಮೊಂಥಾ ಎಂಬ ಹೆಸರು ಇಡಲಾಗಿದೆ. ಅ.೨೭ರಂದು ಚೆನ್ನೈ, ತಿರುವಲ್ಲೂರು ಮತ್ತು ರಾಣಿಪೇಟೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇದನ್ನು ಓದಿ: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಇನ್ನು ಒಂದು ವಾರ ಮಳೆ
ಆಗ್ನೇಯ ಭಾಗದಲ್ಲಿ ಒತ್ತಡ ಸೃಷ್ಟಿಯಾಗಲಿದೆ. ಸೋಮವಾರ ಇದು ಇನ್ನಷ್ಟು ತೀವ್ರಗೊಳ್ಳಲಿದೆ. ನಂತರ ಚಂಡಮಾರುತವು ವಾಯುವ್ಯ ಭಾಗಕ್ಕೆ ನಿಧಾನಕ್ಕೆ ಸಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ತಿಳಿಸಿದೆ.
ಚಂಡಮಾರುತ ಪರಿಣಾಮವಾಗಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶದಲ್ಲಿ ಅ.೨೮ರವರೆಗೂ ಮಳೆ ಮುಂದುವರಿಯಲಿದೆ. ಅ.೨೬ರಿಂದ ೨೮ರವರೆಗೆ ಕರಾವಳಿ ಕರ್ನಾಟಕದ ಭಾಗದಲ್ಲಿ, ಆಂಧ್ರಪ್ರದೇಶದ ರಾಯಲಸೀಮಾ ಪ್ರದೇಶದಲ್ಲಿ ಅ.೨೭ರಿಂದ ಭಾರಿ ಮಳೆಯಾಗಲಿದ್ದು, ಮೊಂತಾ ಚಂಡಮಾರುತ ರಾಜ್ಯದ ಮಚಲೀಪಟ್ಟಣ ಮತ್ತು ಕಾಳಿಂಗಪಟ್ಟಣಂ ಪ್ರದೇಶವನ್ನು ದಾಟಲಿದೆ. ಅ.೨೮ರಂದು ಕಾಕಿನಾಡವನ್ನು ದಾಟಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ರಾಜ್ಯ ವಿಪತ್ತು ನಿರ್ವಹಣಾ ತಂಡಗಳು ವಿಕೋಪ ಎದುರಿಸಲು ಸರ್ವಸನ್ನದ್ಧವಾಗಿವೆ.
ಪಂಜು ಗಂಗೊಳ್ಳಿ ನೂರಾರು ಜನ ವಿಶೇಷಚೇತನರಿಗೆ ಫೋಟೋಗ್ರಫಿ ತರಬೇತಿ ಎವ್ಗನ್ ಬಾವ್ಚಾರ್ ೧೯೪೬ರಲ್ಲಿ ಸ್ಲೊವೇನಿಯಾ (ಆಗ ಯುಗೊಸ್ಲೇವಿಯಾ)ದಲ್ಲಿ ಹುಟ್ಟಿದರು. ಏಳು…
ಇತ್ತೀಚಿನ ಅಂಕಿಅಂಶಗಳ ಪ್ರಕಾರ, ಭಾರತದಲ್ಲಿ ಅಕ್ರಮ ಸಿಗರೇಟ್ ಮಾರುಕಟ್ಟೆಯು ವಾರ್ಷಿಕವಾಗಿ ಸುಮಾರು ರೂ.೧೫,೦೦೦ ಕೋಟಿಗೂ ಅಧಿಕ ನಷ್ಟವನ್ನು ಸರ್ಕಾರಕ್ಕೆ ಉಂಟುಮಾಡುತ್ತಿದೆ.…
ದ್ವಿಚಕ್ರ ವಾಹನಗಳಿಗೆ ಸಂಚಾರ ನಿಯಮದಂತೆ ಎರಡೂ ಕಡೆ ದರ್ಪಣವನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಯಾರು ಈ ನಿಯಮವನ್ನು ಉಲ್ಲಂಘಿಸುತ್ತಾರೋ ಅವರಿಗೆ ಸಂಚಾರ…
ಮೈಸೂರಿನ ಕುವೆಂಪುನಗರದ ನೃಪತುಂಗ ರಸ್ತೆಯ ಶಾಂತಿ ಸಾಗರ್ ಕಾಂಪ್ಲೆಕ್ಸ್ ನ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಮದ್ದೂರು ವಡೆ ಸೆಂಟರ್ ಮತ್ತು…
ಪ್ರಶಾಂತ್ ಎಸ್. ಮೈಸೂರು: ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಲವೆಡೆ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನಗಳ ಸವಾರರು ಜೀವವನ್ನು…
ಕೆ.ಬಿ.ರಮೇಶನಾಯಕ ಮೈಸೂರು: ಕಪಿಲಾ ನದಿ ತೀರದ ಸುತ್ತೂರಿನಲ್ಲಿ ಆರುದಿನಗಳ ಕಾಲ ಅತ್ಯಂತ ಸಡಗರ, ಸಂಭ್ರಮದಿಂದ ನಡೆದ ಧಾರ್ಮಿಕ, ಸಾಂಸ್ಕೃತಿಕ, ವೈಜ್ಞಾನಿಕ…