ದೇಶ- ವಿದೇಶ

ವಾಯುಭಾರ ಕುಸಿತ: ಕರ್ನಾಟಕ, ತಮಿಳುನಾಡಿನಲ್ಲಿ ಭಾರಿ ಮಳೆ ಮುನ್ಸೂಚನೆ

ಹೊಸದಿಲ್ಲಿ : ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ ಹಿನ್ನೆಲೆ ಕರ್ನಾಟಕ, ತಮಿಳು ನಾಡು, ಆಂಧ್ರಪ್ರದೇಶ, ಒಡಿಶಾಸ ಕರಾವಳಿ ಭಾಗದಲ್ಲಿ ೯೦-೧೦೦ ಕಿಲೋಮೀಟರ್ ವೇಗದ ರಭಸದ ಗಾಳಿ ಬೀಸಲಿದ್ದು, ಮುಂದಿನ ವಾರದ ಪ್ರಾರಂಭದಲ್ಲೇ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈ ಚಂಡಮಾರುತಕ್ಕೆ ಅಂತರರಾಷ್ಟ್ರೀಯ ಸಮುದಾಯದ ಶಿಫಾರಸಿನಂತೆ ಥಾಯ್ಲೆಂಡ್‌ನ ಮೊಂಥಾ ಎಂಬ ಹೆಸರು ಇಡಲಾಗಿದೆ. ಅ.೨೭ರಂದು ಚೆನ್ನೈ, ತಿರುವಲ್ಲೂರು ಮತ್ತು ರಾಣಿಪೇಟೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇದನ್ನು ಓದಿ: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಇನ್ನು ಒಂದು ವಾರ ಮಳೆ

ಆಗ್ನೇಯ ಭಾಗದಲ್ಲಿ ಒತ್ತಡ ಸೃಷ್ಟಿಯಾಗಲಿದೆ. ಸೋಮವಾರ ಇದು ಇನ್ನಷ್ಟು ತೀವ್ರಗೊಳ್ಳಲಿದೆ. ನಂತರ ಚಂಡಮಾರುತವು ವಾಯುವ್ಯ ಭಾಗಕ್ಕೆ ನಿಧಾನಕ್ಕೆ ಸಾಗುವ ಸಾಧ್ಯತೆಗಳಿವೆ ಎಂದು ಇಲಾಖೆ ತಿಳಿಸಿದೆ.

ಚಂಡಮಾರುತ ಪರಿಣಾಮವಾಗಿ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ಪ್ರದೇಶದಲ್ಲಿ ಅ.೨೮ರವರೆಗೂ ಮಳೆ ಮುಂದುವರಿಯಲಿದೆ. ಅ.೨೬ರಿಂದ ೨೮ರವರೆಗೆ ಕರಾವಳಿ ಕರ್ನಾಟಕದ ಭಾಗದಲ್ಲಿ, ಆಂಧ್ರಪ್ರದೇಶದ ರಾಯಲಸೀಮಾ ಪ್ರದೇಶದಲ್ಲಿ ಅ.೨೭ರಿಂದ ಭಾರಿ ಮಳೆಯಾಗಲಿದ್ದು, ಮೊಂತಾ ಚಂಡಮಾರುತ ರಾಜ್ಯದ ಮಚಲೀಪಟ್ಟಣ ಮತ್ತು ಕಾಳಿಂಗಪಟ್ಟಣಂ ಪ್ರದೇಶವನ್ನು ದಾಟಲಿದೆ. ಅ.೨೮ರಂದು ಕಾಕಿನಾಡವನ್ನು ದಾಟಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ರಾಜ್ಯ ವಿಪತ್ತು ನಿರ್ವಹಣಾ ತಂಡಗಳು ವಿಕೋಪ ಎದುರಿಸಲು ಸರ್ವಸನ್ನದ್ಧವಾಗಿವೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

1 hour ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

5 hours ago