ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಗಾಳಿಯ ಗುಣಮಟ್ಟದಲ್ಲಿ ಕೊಂಚ ಸುಧಾರಣೆ ಕಂಡುಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಹಿನ್ನೆಲೆಯ್ಲಲಿ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ ಅಡಿಯಲ್ಲಿ ವಿಧಿಸಲಾಗಿದ್ದ 3ನೇ ಹಂತದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ. ಇದರ ಜೊತೆಗೆ ಪೆಟ್ರೋಲ್, ಡೀಸೆಲ್ ವಾಹನಗಳ ಮೇಲಿನ ನಿರ್ಬಂಧಗಳನ್ನು ಸಹ ಸಡಿಲಗೊಳಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಸಕಾರಾತ್ಮಕ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ದೆಹಲಿಯ ಎನ್‌ಸಿಆರ್ ಮತ್ತು ಅಕ್ಕಪಕ್ಕದ ಪ್ರದೇಶಗಳಲ್ಲಿ ವಿಧಿಸಲಾಗಿದ್ದು 3ನೇ ಹಂತದ ನಿರ್ಬಂಧಗಳನ್ನು ಸರ್ಕಾರ ತೆರವುಗೊಳಿಸಿದೆ.
ಇನ್ನು ಕೈಗಾರಿಕಾ ಘಟಕಗಳು ಹಾಗೂ ಕಟ್ಟಡ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದಂತೆ ವಿಧಿಸಲಾದ ನಿರ್ಬಂಧಗಳು ಮುಂದಿನ ಆದೇಶದವರೆಗೂ ಮುಂದುವರಿಯಲಿದೆ ಎಂದು ಸರ್ಕಾರ ತಿಳಿಸಿದೆ.




