Mysore
23
broken clouds

Social Media

ಭಾನುವಾರ, 12 ಏಪ್ರಿಲ 2026
Light
Dark

ಅಜಿತ್‌ ಪವಾರ್‌ ಸಾವು: ತನಿಖೆಗೆ ಆಗ್ರಹಿಸಿದ ಮಮತಾ ಬ್ಯಾನರ್ಜಿ

ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಈ ಘಟನೆಯಲ್ಲಿ ಸಂಚು ನಡೆದಿರುವ ಸಾಧ್ಯತೆಯಿದೆ ಎಂದು ಸುಳಿವು ನೀಡಿರುವ ಅವರು, ಈ ಘಟನೆಯ ಹಿಂದೆ ಯಾವುದೋ ವ್ಯವಸ್ಥಿತ ಸಂಚು ಅಥವಾ ರಾಜಕೀಯ ಪ್ರೇರಿತ ಪೌಲ್‌ ಪ್ಲೇ ಇರಬಹುದು. ಕೇಂದ್ರ ತನಿಖಾ ಸಂಸ್ಥೆಗಳ ಬದಲಿಗೆ, ನೇರವಾಗಿ ಸುಪ್ರೀಂಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡದಿಂದ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

 

Tags:
error: Content is protected !!