Mysore
26
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಶಾಂತಿ ಮಾತುಕತೆಗಾಗಿ ರಷ್ಯಾಗೆ ಭೇಟಿ ನೀಡಲಿರುವ ಅಜಿತ್‌ ಧೋವಲ್‌

ನವದೆಹಲಿ: ರಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧ ಮುಂದುವರೆದಂತೆ ಉಭಯ ದೇಶಗಳ ನಡುವಿನ ಶಾಂತಿ ಮಾತುಕತೆ ಕುರಿತ ಸಂಧಾನಕ್ಕಾಗಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಧೋವಲ್‌ ರಷ್ಯಾಗೆ ದೌಡಾಯಿಸಲಿದ್ದಾರೆ.

ಬಲ್ಲ ಮೂಲಗಳ ಪ್ರಕಾರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಧೋವಲ್‌ ಈ ವಾರ ರಷ್ಯಾ-ಉಕ್ರೇನ್‌ ಯುದ್ಧಕ್ಕೆ ಶಾಂತಿಯುವ ಪರಿಹಾರವನ್ನು ಸಾಧಿಸುವ ಕುರಿತು ಮಾತುಕತೆ ನಡೆಸಲು ಅಜಿತ್‌ ಧೋವಲ್‌ ರಷ್ಯಾಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಳೆದ ಎರಡು ತಿಂಗಳಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಮತ್ತು ಉಕ್ರೇನ್‌ಗೆ ಭೇಟಿ ನೀಡಿದ್ದರು. ಈ ಬೆನ್ನಲ್ಲೇ ಈ ಬೆಳವಣಿಗೆಗಳು ಆರಂಭವಾಗಿದ್ದು, ಮುಂದೆ ಇದು ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದುನೋಡಬೇಕಿದೆ.

Tags:
error: Content is protected !!