ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್ ಪವಾರ್ ಪತ್ನಿ ಸುನೇಂದ್ರ ಪವಾರ್ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು ಎನ್‌ಸಿಪಿ ನಿರ್ಧರಿಸಿದೆ.
ಇಂದು ಮಧ್ಯಾಹ್ನ ಮುಂಬೈನಲ್ಲಿ ನಡೆಯಲಿರುವ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುನೇತ್ರಾ ಪವಾರ್ ಅವರನ್ನು ನಾಯಕಿಯಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ.
ಆ ಬಳಿಕ ಸುನೇತ್ರಾ ಪವಾರ್ ಅವರು ಸಂಜೆ ಐದು ಗಂಟೆಗೆ ರಾಜಭವನದಲಲಿ ನಡೆಯಲಿರುವ ಸಮಾರಂಭದಲ್ಲಿ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಅಜಿತ್ ಪವಾರ್ ಅವರು ವಹಿಸಿಕೊಂಡಿದ್ದ ಹಣಕಾಸು, ಅಬಕಾರಿ ಹಾಗೂ ಕ್ರೀಡಾ ಸೇರಿದಂತೆ ಪ್ರಮುಖ ಖಾತೆಗಳನ್ನು ಸುನೇತ್ರಾ ಪವಾರ್ ಅವರೇ ಮುಂದುವರಿಸಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.





