ಲಕ್ನೋ: ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರ ಸೋದರಳಿಯ ಆಕಾಶ್ ಆನಂದ್ ಮತ್ತೊಮ್ಮೆ ರಾಜಕೀಯಕ್ಕೆ ಮರಳಿದ್ದಾರೆ. ಆಕಾಶ್ ಆನಂದ್ ಅವರನ್ನು ಬಿಎಸ್‌ಪಿಯ ರಾಷ್ಟ್ರೀಯ ಸಂಯೋಜಕರನ್ನಾಗಿ ಮಾಯಾವತಿ ನೇಮಿಸಿದ್ದಾರೆ.
ಮುಂಬರುವ ಚುನಾವಣೆಯಲ್ಲಿ ಆಕಾಶ್ ಆನಂದ್ ಪಕ್ಷದ ಪ್ರಚಾರದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದು, ಪ್ರಸ್ತುತ ಈಗ ಬಿಎಸ್‌ಪಿಯಲ್ಲಿ ಮೂವರು ರಾಷ್ಟ್ರೀಯ ಸಂಯೋಜಕರನ್ನು ನೇಮಕ ಮಾಡಲಾಗಿದೆ.
ಇದಕ್ಕೂ ಮೊದಲು ಮಾಯಾವತಿ ತಮ್ಮ ಸೋದರಳಿಯ ಆಕಾಶ್ ಆನಂದ್ ಮತ್ತು ಅವರ ಮಾವ ಅಶೋಕ್ ಸಿದ್ಧಾರ್ಥ್ ಅವರನ್ನು ಅಶಿಸ್ತಿನ ಆರೋಪದ ಮೇಲೆ ಪಕ್ಷದಿಂದ ಹೊರಹಾಕಿದ್ದರು. ಇದೀಗ ಆಕಾಶ್‌ಗೆ ಮತ್ತೊಂದು ಅವಕಾಶ ನೀಡಲು ನಿರ್ಧರಿಸಿದ್ದು, ಪಕ್ಷ ಸಂಘಟನೆಗಾಗಿ ಈ ನಿರ್ಧಾರ ಎಂದು ಮಾಯಾವತಿ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮಾಯಾವತಿ ಅವರು, ಭವಿಷ್ಯದಲ್ಲಿ ಯಾರನ್ನೂ ತಮ್ಮ ಉತ್ತರಾಧಿಕಾರಿಯಾಗಿ ನೇಮಿಸುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಛರಿಸಿದ್ದಾರೆ.





