ದೇಶ- ವಿದೇಶ

ಬಿಎಸ್‌ಪಿ ರಾಷ್ಟ್ರೀಯ ಸಂಯೋಜಕರಾಗಿ ಆಕಾಶ್‌ ಆನಂದ್‌ ನೇಮಕ

ಲಕ್ನೋ: ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರ ಸೋದರಳಿಯ ಆಕಾಶ್‌ ಆನಂದ್‌ ಮತ್ತೊಮ್ಮೆ ರಾಜಕೀಯಕ್ಕೆ ಮರಳಿದ್ದಾರೆ. ಆಕಾಶ್‌ ಆನಂದ್‌ ಅವರನ್ನು ಬಿಎಸ್‌ಪಿಯ ರಾಷ್ಟ್ರೀಯ ಸಂಯೋಜಕರನ್ನಾಗಿ ಮಾಯಾವತಿ ನೇಮಿಸಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ಆಕಾಶ್‌ ಆನಂದ್‌ ಪಕ್ಷದ ಪ್ರಚಾರದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದು, ಪ್ರಸ್ತುತ ಈಗ ಬಿಎಸ್‌ಪಿಯಲ್ಲಿ ಮೂವರು ರಾಷ್ಟ್ರೀಯ ಸಂಯೋಜಕರನ್ನು ನೇಮಕ ಮಾಡಲಾಗಿದೆ.

ಇದಕ್ಕೂ ಮೊದಲು ಮಾಯಾವತಿ ತಮ್ಮ ಸೋದರಳಿಯ ಆಕಾಶ್‌ ಆನಂದ್‌ ಮತ್ತು ಅವರ ಮಾವ ಅಶೋಕ್‌ ಸಿದ್ಧಾರ್ಥ್‌ ಅವರನ್ನು ಅಶಿಸ್ತಿನ ಆರೋಪದ ಮೇಲೆ ಪಕ್ಷದಿಂದ ಹೊರಹಾಕಿದ್ದರು. ಇದೀಗ ಆಕಾಶ್‌ಗೆ ಮತ್ತೊಂದು ಅವಕಾಶ ನೀಡಲು ನಿರ್ಧರಿಸಿದ್ದು, ಪಕ್ಷ ಸಂಘಟನೆಗಾಗಿ ಈ ನಿರ್ಧಾರ ಎಂದು ಮಾಯಾವತಿ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮಾಯಾವತಿ ಅವರು, ಭವಿಷ್ಯದಲ್ಲಿ ಯಾರನ್ನೂ ತಮ್ಮ ಉತ್ತರಾಧಿಕಾರಿಯಾಗಿ ನೇಮಿಸುವ ಪ್ರಶ್ನೆಯೇ ಇಲ್ಲ ಎಂದು ಪುನರುಚ್ಛರಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

2 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

2 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

2 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

3 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

3 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

4 hours ago